ಅನುಶ್ರೀ ಹಾಗೂ ಪತಿ ಮಹೇಶ್ ಮಧ್ಯೆ ಆಗಾಗ ಜಗಳವಾಗುತ್ತಿತ್ತು, ಮಂಗಳವಾರ ರಾತ್ರಿಯೂ ಜಗಳವಾಗಿದ್ದು, ಇದರಿಂದ ಮನನೊಂದ ಅನುಶ್ರೀ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದ್ದು, ಅನುಶ್ರೀಯ ತವರುಮನೆಯವರು ನೀಡಿದ ದೂರಿನ ಮೇರೇಗೆ ಸರ್ಕಲ್ ಇನ್ಸ್ಪೆಕ್ಟರ್ ಅನಂತ್ರಾಮ್ ಹಾಗೂ ಸಿಬ್ಬಂದಿ ಸ್ಥಳ ಪರಿಶೀಲಿಸಿ, ಮಹೇಶ್ನನ್ನು ವಶಕ್ಕೆ ಪಡೆದಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ಮರಣೋತ್ತರ ಪರೀೆ ನಡೆಸಿ, ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.