ಈ ಅಕ್ರಮದ ಕುರಿತು ಕಳೆದ ಡಿಸೆಂಬರ್ನಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ದೂರು ನೀಡಲಾಗಿತ್ತು. ಸಚಿವರು ತನಿಖೆಗೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಜಿಲ್ಲಾಧಿಕಾರಿಗಳು ಮರುತನಿಖೆ ನಡೆಸಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅಲ್ಲದೆ, ತಹಸೀಲ್ದಾರ್ ಅವರು ನಕಲಿ ದಾಖಲೆ ಸೃಷ್ಟಿಸಿದ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲು ಪತ್ರ ಬರೆದಿದ್ದರೂ, ಪೊಲೀಸರು ಮಾತ್ರ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.