ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಸಾಧಿಸಿರುವ ಪ್ರಗತಿ, ಖೇತಿ ಬಚಾವೋ ಅಭಿಯಾನ ಹಾಗೂ ಕೃಷಿಕ ಅಪ್ಲಿಕೇಶನ್, ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ವಿಶ್ವಕರ್ಮ ಯೋಜನೆ, ಪ್ರಧಾನ ಮಂತ್ರಿ ಮುದ್ರಾ ಯೋಜನೆ, ಪಿಎಂ ಸೂರ್ಯ ಘರ್ ಯೋಜನೆ, ಪ್ರಧಾನ ಮಂತ್ರಿ ಸೂಕ್ಷ$್ಮ ಆಹಾರ ಸಂಸ್ಕರಣಾ ಉದ್ಯಮಗಳ ಔಪಚಾರಿಕೀಕರಣ ಯೋಜನೆ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳ ಕುರಿತೂ ಪ್ರಗತಿ ಪರಿಶೀಲನೆ ನಡೆಸಲಾಯಿತು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಮೋಲ್ ಜೈನ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮೋಹನ್ ಕುಮಾರ್, ವಿವಿಧ ಬ್ಯಾಂಕ್ಗಳ ಅಧಿಕಾರಿಗಳಾದ ರಾಜ್ ಕುಮಾರ್, ವಿಜಯಶ್ರೀ ಮುಂತಾದವರು ಇದ್ದರು.