ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ಗುರುವಾರ ಕನ್ನಡ ಸಾಹಿತ್ಯ ಪರಿಷತ್‌ನಿಂದ ಹಮ್ಮಿಕೊಂಡಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯಲ್ಲಿ ಉಪನ್ಯಾಸ ನೀಡಿದ ಅವರು, ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ. ಶಾಲಾ-ಕಾಲೇಜುಗಳು, ವಾಣಿವಿಲಾಸ ಸಾಗರ, ಕೃಷ್ಣರಾಜ ಸಾಗರ ಅಣೆಕಟ್ಟು, ಜಲವಿದ್ಯುತ್ ಕೇಂದ್ರ, ಆಸ್ಪತ್ರೆಗಳು, ಕನ್ನಡ ಸಾಹಿತ್ಯ ಪರಿಷತ್, ಮೈಸೂರು ಬ್ಯಾಂಕ್ ಸ್ಥಾಪನೆ ಹೀಗೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿಕೊಟ್ಟು ರಾಷ್ಟ್ರವೇ ಹೆಮ್ಮೆ ಪಡುವಂತೆ ಮಾಡಿದ ಅನನ್ಯ ಸಾಧಕರು ಎಂದು ಬಣ್ಣಿಸಿದರು.