ಅಪರಿಚಿತ ವಾಹನ ಡಿಕ್ಕಿ ಚಿರತೆ ಸಾವು

*ಮಾಗಡಿ ಬಳಿ ಘಟನೆ *ರಾಷ್ಟ್ರೀಯ ಹೆದ್ದಾರಿಯ ಗುಡೇಮಾರನಹಳ್ಳಿ * ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
leopard death
ಮಾಗಡಿಯ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಮೃತಪಟ್ಟಿರುವ ಚಿರತೆ.
Published on: 

ರಾಮನಗರ: ಅಪರಿಚಿತ ವಾಹನ ಡಿಕ್ಕಿಯಾಗಿ 5 ವರ್ಷದ ಗಂಡು ಚಿರತೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.

ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಡೇಮಾರನಹಳ್ಳಿ ಹ್ಯಾಂಡ್‌ಪೋಸ್ಟ್ ಬಳಿ ಮಂಗಳವಾರ ಮುಂಜಾನೆ ಈ ಘಟನೆ ನಡೆದಿದ್ದು, ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ, ಚಿರತೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ.

ವಿಷಯ ತಿಳಿದ ತಕ್ಷಣ ವಲಯ ಅರಣ್ಯ ಇಲಾಖೆ ಅಧಿಕಾರಿ ಟಿ. ನೇತ್ರಾವತಿ ಹಾಗೂ ಪಶು ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತದನಂತರ ನಿಯಮಾನುಸಾರ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಈ ಭಾಗದಲ್ಲಿ ಕಾಡುಪ್ರಾಣಿಗಳು ರಸ್ತೆ ದಾಟುವಾಗ ವಾಹನಗಳಿಗೆ ಬಲಿಯಾಗುತ್ತಿರುವುದು ಇದೇ ಮೊದಲೇನಲ್ಲ. ಪದೇ ಪದೇ ಇಂತಹ ಭೀಕರ ಅಪಘಾತಗಳು ನಡೆಯುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಣುಮುಚ್ಚಿ ಕುಳಿತಿದೆ ಎಂದು ಪ್ರಾಣಿ ಪ್ರಿಯರು ಮತ್ತು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net