ಕೆಂಪಸಾಗರದಲ್ಲಿ ಚಿರತೆ ಸಾವು

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಮಾಗಡಿ: ಕೆಂಪಸಾಗರ ಸರ್ಕಾರಿ ಶಾಲೆ ಹಿಂಭಾಗದಲ್ಲಿರುವ ರೈತ ಸೀನಪ್ಪ ಅವರ ಜಮೀನಿನ ಬಳಿ ಸುಮಾರು ಎರಡು ವರ್ಷದ ಗಂಡು ಚಿರತೆ ಅನುಮಾನಾಸ್ಪದವಾಗಿ ಮೃತಪಟ್ಟಿದೆ.
ರೈತರು ಎಂದಿನಂತೆ ಮಂಗಳವಾರ ಬೆಳಗ್ಗೆ ಜಾನುವಾರುಗಳಿಗೆ ಮೇವು ತರಲು ಜಮೀನಿನ ಕಡೆಗೆ ತೆರಳುತ್ತಿದ್ದಾಗ ಚಿರತೆ ಸತ್ತು ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ, ಪಶುವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಎರಡು ದಿನಗಳ ಹಿಂದೆಯೇ ಚಿರತೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀೆ ವರದಿ ಬಂದ ಬಳಿಕ ಸತ್ಯಾಸತ್ಯತೆ ತಿಳಿಯಬೇಕಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.
"

ಮೇಲ್ನೋಟಕ್ಕೆ ಚಿರತೆಯು ಹಸಿವಿನಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಆದರೂ ಮರಣೋತ್ತರ ಪರೀೆ ವರದಿ ಬಂದ ನಂತರವಷ್ಟೇ ಸಾವು ಹೇಗೆ ಸಂಭವಿಸಿದೆ ಎಂಬುದು ಅಧಿಕೃತವಾಗಿ ದೃಢಪಡಲಿದೆ. .

— > ಜಿ.ಕೆ. ಚೈತ್ರಾ, ವಲಯ ಅರಣ್ಯಾಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net