ಅರ್ಹರಿಗೆ ಗ್ಯಾರಂಟಿ ತಲುಪಲಿ

ಕೆ.ರಾಜು ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ನಡೆಯಿತು.
ಕೆ.ರಾಜು ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ನಡೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಕೆ.ರಾಜು ನಿರ್ದೇಶನ
  • ಜಿಲ್ಲೆಯಲ್ಲಿ 225 ಎಪಿಎಲ್​ ಕಾರ್ಡ್​ಗಳು ಬಿಪಿಎಲ್​ಗೆ ಪರಿವರ್ತನೆ
ರಾಮನಗರ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಎಲ್ಲ ಅರ್ಹ ಫಲಾನುಭವಿಗಳಿಗೆ ತಲುಪಬೇಕು ಹಾಗೂ ಅರ್ಹರಿರುವ ಯಾವೊಬ್ಬ ಫಲಾನುಭವಿಯೂ ಈ ಯೋಜನೆಗಳಿಂದ ಹೊರಗುಳಿಯದಂತೆ ಎಚ್ಚರ ವಹಿಸಬೇಕೆಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ರಾಜು ನಿರ್ದೇಶನ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸರ್ಕಾರದ ಮಾನದಂಡಗಳಿಗೆ ಒಳಪಡದೇ ಇರುವುದರಿಂದ ಜಿಲ್ಲೆಯ 937 ಅಂತ್ಯೋದಯ ಪಡಿತರ ಚೀಟಿಗಳನ್ನು ಎಪಿಎಲ್​ ಪಡಿತರ ಚೀಟಿಗೆ ಪರಿವರ್ತಿಸಲಾಗಿದೆ. ಅದರಲ್ಲಿ ಚನ್ನಪಟ್ಟಣ ತಾಲೂಕಿನಲ್ಲಿ 134, ಕನಕಪುರ ತಾಲೂಕಿನಲ್ಲಿ 209, ಹಾರೋಹಳ್ಳಿ ತಾಲೂಕಿನಲ್ಲಿ 71, ಮಾಗಡಿ ತಾಲೂಕಿನಲ್ಲಿ 285 ಹಾಗೂ ಚನ್ನಪಟ್ಟಣ ತಾಲೂಕಿನಲ್ಲಿ 238 ಎಎವೈ ಪಡಿತರ ಚೀಟಿಯಿಂದ ಎಪಿಎಲ್​ಗೆ ಪರಿವರ್ತಿಸಲಾಗಿದೆ. ಅನರ್ಹ ಪಡಿತರ ಚೀಟಿಗಳಿಂದ ಸರ್ಕಾರದ ಆರ್ಥಿಕ ಹೊರೆ ತಗ್ಗಲಿದೆ ಎಂದರು.
ಜಿಲ್ಲೆಯ 225 ಎಪಿಎಲ್​ ಪಡಿತರ ಚೀಟಿಗಳನ್ನು ಬಿಪಿಎಲ್​ಗೆ ಪರಿವರ್ತಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ 2025ರ ಫೆಬ್ರವರಿ ಮಾಹೆಯಿಂದ 2026ರ ಜೂನ್​ ಮಾಹೆಯವರೆಗೆ ಪಡಿತರ ಚೀಟಿ ಫಲಾನುಭವಿಗಳಿಗೆ ಒಟ್ಟು 7,37,670 ಕ್ವಿಂಟಾಲ್​ ಅನ್ನಭಾಗ್ಯ ಅಕ್ಕಿ ಹಂಚಿಕೆ ಮಾಡಲಾಗಿದೆ ಎಂದು ಸಂಬಂಧಿಸಿದ ಇಲಾಖೆಯ ಉಪನಿರ್ದೇಶಕರು ಸಭೆಯಲ್ಲಿ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಗೃಹಲಕ್ಷಿ$್ಮ ಯೋಜನೆಯಡಿ ನೋಂದಣಿಯಾಗಿ ಮರಣ ಹೊಂದಿದ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಎಲ್ಲ ಫಲಾನುಭವಿಗಳನ್ನು ಗೃಹಲಕ್ಷಿ$್ಮ ಯೋಜನೆಯಿಂದ ಕೈಬಿಡಲಾಗಿದೆ. 4,800 ಫಲಾನುಭವಿಗಳು ಐಟಿ/ಜಿಎಸ್​ಟಿ ಪಾವತಿದಾರರಾಗಿದ್ದು, ಈ ಫಲಾನುಭವಿಗಳನ್ನು ಪಟ್ಟಿಯಿಂದ ತೆಗೆದು ಹಾಕಲು ಶೀಘ್ರವಾಗಿ ಕ್ರಮವಹಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಿದರು.
ಸಭೆಯಲ್ಲಿ ಸಮಿತಿಯ ಉಪಾಧ್ಯಕ್ಷರಾದ ಮಹದೇಶ್​, ಎಸ್​.ಸಿ. ಶೇಖರ್​, ಸಿದ್ದೇಗೌಡ, ರಾಮನಗರ ತಾಲೂಕು ಅಧ್ಯಕ್ಷ ರಾಜು, ಮಾಗಡಿ ತಾಲೂಕು ಅಧ್ಯಕ್ಷ ಕಲ್ಕೆರೆ ಶಿವಣ್ಣ, ಜಿಲ್ಲಾ ಸಮಿತಿ ಸದಸ್ಯ ಶಿವಮಾದಯ್ಯ, ಎಂ. ಮಹದೇವ್​, ಕಾಳಮ್ಮ, ಎಸ್​.ಜಿ.ವನಜಾ, ಶೋಭಾ, ಜಿಪಂ ಉಪಕಾರ್ಯದರ್ಶಿ ಧನರಾಜ್​ ಇದ್ದರು.
ಹೆಚ್ಚಿನ ಬಸ್​ ಸೌಲಭ್ಯ ಕಲ್ಪಿಸಿ:
ಶಾಲಾ&-ಕಾಲೇಜುಗಳು ಆರಂಭಗೊಂಡಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಅವಶ್ಯವಿರುವ ಗ್ರಾಮಗಳಿಗೆ ಬಸ್​ ವ್ಯವಸ್ಥೆ ಹಾಗೂ ಜನದಟ್ಟಣೆ ಸಮಯದಲ್ಲಿ ಹೆಚ್ಚಿನ ಬಸ್​ ಸೌಲಭ್ಯ ಕಲ್ಪಿಸಬೇಕು. ಜಿಲ್ಲೆಯ ಆಯಾ ಡಿಪೋ ಮ್ಯಾನೇಜರ್​ಗಳು ಭಾನುವಾರ, ಸೋಮವಾರ ಮತ್ತು ಪ್ರಯಾಣಿಕರ ದಟ್ಟಣೆಯ ಅವಧಿಯಲ್ಲಿ ಕಡ್ಡಾಯವಾಗಿ ಖುದ್ದು ಹಾಜರಾಗಿ ಸಂಚಾರ ದಟ್ಟಣೆ ನಿಯಂತ್ರಿಸಿ ಜನರಿಗೆ ಅನುಕೂಲವಾಗುವಂತೆ ಅವಶ್ಯಕತೆಯಿದ್ದಲ್ಲಿ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಿಸುವಂತೆ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ರಾಜು ಸೂಚಿಸಿದರು.
ಗ್ಯಾರಂಟಿ ಯೋಜನೆಯಿಂದ ಹೊರಗುಳಿಯದಿರಲಿ:
ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನ ಮಾಡಲು ಜಿಲ್ಲೆಯ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಶ್ರಮಿಸಬೇಕು, ಯೋಜನೆಗೆ ಅರ್ಹರಿರುವ ಯಾವುದೇ ಫಲಾನುಭವಿಯು ಗ್ಯಾರಂಟಿ ಯೋಜನೆಯಿಂದ ಹೊರಗುಳಿಯಬಾರದು ಹಾಗೂ ಈ ಯೋಜನೆಗಳ ಯಶಸ್ಸಿಗೆ ಎಲ್ಲ ಅಧಿಕಾರಿಗಳು ಸಹಕರಿಸಬೇಕೆಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ರಾಜು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net