ಬೆಳಗವಾಡಿ ಗ್ರಾಮದ ತಿಮ್ಮಯ್ಯ ಅವರ ಫಾರಂ ಹೌಸ್ ಮನೆ, ಕಚೇರಿ ಹಾಗೂ ಸಂಬಂಧಿಕರ ನಿವಾಸಗಳು ಸೇರಿ ಹಲವು ಕಡೆ ಏಕಕಾಲದಲ್ಲಿ ಲೋಕಾಯುಕ್ತ ಪೊಲೀಸರು 7 ತಂಡಗಳಲ್ಲಿ ದಾಳಿ ನಡೆಸಿದ್ದಾರೆ. ಅಧಿಕಾರಿಗಳು ಒಟ್ಟು ಮೂರಕ್ಕೂ ಹೆಚ್ಚು ಪ್ರಮುಖ ಸ್ಥಳಗಳು ಹಾಗೂ ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಅಂಧ್ರಹಳ್ಳಿಯ ಡಿ&ಗ್ರೂಪ್ ಲೇಔಟ್ನಲ್ಲಿರುವ ನಿವಾಸದ ಮೇಲೂ ದಾಳಿ ಮಾಡಲಾಗಿದ್ದು, ಪಿಡಿಒ ತಿಮ್ಮಯ್ಯ ಅವರ ಅಣ್ಣ ಹಾಗೂ ಅಕ್ಕನ ಮಗನ ಮನೆಗಳಲ್ಲಿ ಅಧಿಕಾರಿಗಳು ಜಾಲಾಡಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.