ಟಾಟಾಏಸ್​ ಡಿಕ್ಕಿಯಾಗಿ ವ್ಯಕ್ತಿ ಸಾವು

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಕನಕಪುರ: ಗ್ರಾಮಾಂತರ ಪೊಲೀಸ್​ ಠಾಣೆ ವ್ಯಾಪ್ತಿಯ ಶ್ರೀನಿವಾಸನಹಳ್ಳಿ ಗೇಟ್​ಬಳಿ ಗುರುವಾರ ಸಂಜೆ ರಸ್ತೆ ಬದಿಯಲ್ಲಿ ನಿಂತಿದ್ದ ಗ್ರಾಮದ ವೆಂಕಟೇಶ್​(55) ಎಂಬುವವರಿಗೆ ಹಿಂದಿನಿಂದ ಬಂದ ಟಾಟಾ ಏಸ್​ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಡಿಹಳ್ಳಿಯಿಂದ ಬಂದ ಟಾಟಾ ಏಸ್​ ಡಿಕ್ಕಿ ಹೊಡೆದಿದ್ದರುಂದ ವೆಂಕಟೇಶ್​ ತಲೆಗೆ ತೀವ್ರ ಸ್ವರೂಪದ ಪೆಟ್ಟಾಗಿತ್ತು. ಗ್ರಾಮಾಂತರ ಪೊಲೀಸರು ಸ್ಥಳ ಪರಿಶೀಲಿಸಿ ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿ ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net