ಎದೆ ನೋವು ಶಾಸಕ ಇಕ್ಬಾಲ್ ಹುಸೇನ್ ಆಸ್ಪತ್ರೆಗೆ ದಾಖಲು

ಶಾಸಕ ಇಕ್ಬಾಲ್ ಹುಸೇನ್ ರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್.
ಶಾಸಕ ಇಕ್ಬಾಲ್ ಹುಸೇನ್ ರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್.
Published on

ಪ್ರಮುಖ ಮುಖ್ಯಾಂಶಗಳು

  • ರಾಮನಗರ ಶಾಸಕ ಇಕ್ಬಾಲ್ ಹುಸೇನ್ ದಿಢೀರ್ ಆಸ್ಪತ್ರೆಗೆ ದಾಖಲು
  • ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ
  • ಸಿಎಂ ಆಸ್ಪತ್ರೆಗೆ ಭೇಟಿ, ಆರೋಗ್ಯ ವಿಚಾರಣೆ
ರಾಮನಗರ: ಶಾಸಕ ಎಚ್.ಎ ಇಕ್ಬಾಲ್ ಹುಸೇನ್ ಎದೆ ನೋವಿನ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಇವರಿಗೆ ಹೃಧಾಯಾಘಾತವಾಗಿದೆ ಎನ್ನುವ ಸುದ್ದಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಲ್ಲಿ ಕೆಲ ಕಾಲ ಆತಂಕವನ್ನು ಸೃಷ್ಠಿ ಮಾಡಿತ್ತು.
ಎಡಗೈ ಸೆಳೆತ ಮತ್ತು ಸಣ್ಣ ಪ್ರಮಾಣದಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಕ್ಬಾಲ್ ಹುಸೇನ್ ಅವರು ಬೆಂಗಳೂರಿನ ವೈಧೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಆದರೆ ಇವರಿಗೆ ಹೃಧಾಯಾಘಾತವಾಗಿದೆ ಎನ್ನುವ ತಪ್ಪು ಮಾಹಿತಿಯೊಂದು ಹರಿದಾಡಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಕೆಲಕಾಲ ಆತಂಕಕ್ಕೆ ಒಳಗಾಗದರು.
ಕಳೆದ ಕೆಲವು ತಿಂಗಳ ಹಿಂದಷ್ಟೇ ಒಂದು ಕಣ್ಣಿನ ಶಸ್ತç ಚಿಕಿತ್ಸೆ ಮಾಡಿಸಿಕೊಂಡಿದ್ದ ಶಾಸಕರು, ಮತ್ತೊಂದು ಕಣ್ಣಿನ ಶಸ್ತç ಚಿಕಿತ್ಸೆ ಮಾಡಿಸಿಕೊಳ್ಳುವ ಸಲುವಾಗಿ ಸೋಮವಾರ ವೈಧ್ಯರನ್ನು ಭೇಟಿ ಮಾಡುವುದಾಗಿ ಸ್ಥಳೀಯ ಮುಖಂಡರಿಗೆ ತಿಳಿಸಿದ್ದರು. ಆದರೆ ಭಾನುವಾರವೇ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಂತರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಹ ಆಸ್ಪತ್ರೆಗೆ ಭೇಟಿ ನೀಡಿ ಶಾಸಕರ ಆರೋಗ್ಯ ವಿಚಾರಿಸಿ, ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ನಂತರ ಕಾರ್ಯಕರ್ತರು ನಿರಾಳಗೊಂಡರು.
---
ಇಕ್ಬಾಲ್ ಹುಸೇನ್ ಆರೋಗ್ಯ ಸ್ಥಿರವಾಗಿದೆ, ಎದೆ ನೋವು ಕಾಣಿಸಿಕೊಂಡ ಕಾರಣ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂದಿನವಾರ ಸಂಪೂರ್ಣವಾಗಿ ಪರೀಕ್ಷೆಗೆ ಒಳಪಡಲಿದ್ದಾರೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ.
ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net