ತಾಲೂಕಿನ ಕೊಂಡಾಪುರ ಗ್ರಾಮದ ವಿಕಾಸ್(22) ಮೃತ. ಟನೆಯಲ್ಲಿ ಕಾರಿನಲ್ಲಿದ್ದ ಆತನ ಸ್ನೇಹಿತರಾದ ಸಿದ್ಧಾರ್ಥ ಹಾಗೂ ನಂದೀಶ್ ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದಾರೆ. ಗುರುವಾರ ರಾತ್ರಿ ನಗರದಿಂದ ಗ್ರಾಮಕ್ಕೆ ತೆರಳುವ ವೇಳೆ, ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ತಲೆಗೆ ತೀವ್ರ ಗಾಯವಾದ ಕಾರಣ ವಿಕಾಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.