ಬೈಕ್​ ಡಿಕ್ಕಿಯಾಗಿ ಪಾದಚಾರಿ ಸಾವು

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಕುದೂರು: ರಾಷ್ಟ್ರೀಯ ಹೆದ್ದಾರಿ&75ರ ಸೋಲೂರು ಮೂನ್​ಲೈಟ್​ ಡಾಬಾ ಬಳಿ ರಸ್ತೆ ದಾಟಲು ನಿಂತಿದ್ದಾಗ ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸೋಲೂರು ಹೋಬಳಿಯ ತಟ್ಟೇಕೆರೆಯ ಶಿವಕುಮಾರ್​ (55) ಮೃತ. ಕಾರ್ಯನಿಮಿತ್ತ ಸೋಮವಾರ ಸ್ವಗ್ರಾಮದಿಂದ ಕೂಡ್ಲೂರಿಗೆ ಹೋಗಲು ಹೆದ್ದಾರಿ ರಸ್ತೆಯಲ್ಲಿ ನಿಂತಿದ್ದಾಗ ಕುಣಿಗಲ್​ ಕಡೆಯಿಂದ ಬಂದ ಬೈಕ್​ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಅಪಘಾತದಿಂದ ದ್ವಿಚಕ್ರ ವಾಹನ ಸವಾರನೂ ಗಾಯಗೊಂಡಿದ್ದಾನೆ ಎನ್ನಲಾಗಿದೆ. ಮೃತದೇಹವನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net