ಅಗ್ನಿಕೊಂಡದಲ್ಲಿ ಬಿದ್ದು ಅರ್ಚಕನಿಗೆ ಗಾಯ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಕನಕಪುರ: ತಾಲೂಕಿನ ಮರಳವಾಡಿ ಹೋಬಳಿಯ ತೇರುಬೀದಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಅಗ್ನಿಕೊಂಡೋತ್ಸವದ ವೇಳೆ ಅರ್ಚಕರೊಬ್ಬರು ಆಯತಪ್ಪಿ ಕೆಂಡದ ಗುಂಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅರ್ಚಕ ಪುಟ್ಟಯ್ಯ (50) ಅವರು ಕೆಂಡದ ಮೇಲೆ ಮೂರ್ನಾಲ್ಕು ಹೆಜ್ಜೆ ಇಡುತ್ತಿದ್ದಂತೆಯೇ ಸಮತೋಲನ ತಪ್ಪಿ ಕೊಂಡದ ಒಳಕ್ಕೆ ಬಿದ್ದರು. ಸ್ಥಳದಲ್ಲಿದ್ದ ಗ್ರಾಮಸ್ಥರು ತಣ ಅವರನ್ನು ಮೇಲೆತ್ತಿದ್ದಾರೆ. ಮೈಯೆಲ್ಲ ಸುಟ್ಟ ಗಾಯಗಳಾಗಿದ್ದು ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net