

ಪ್ರಮುಖ ಮುಖ್ಯಾಂಶಗಳು
*
ರಾಮನಗರ
ದೇಶದ ಅಭಿವೃದ್ಧಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ನಿರ್ಮಾಣಗೊಂಡಿರುವ ಮೈ ಭಾರತ್ ಪೋರ್ಟಲ್‌ನಲ್ಲಿ ಯುವ ಸಮುದಾಯ ನೋಂದಣಿ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಕರೆ ನೀಡಿದರು.
ನಗರದ ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೈ ಭಾರತ್ ಪೋರ್ಟಲ್‌ನ ಕಾರ್ಯಾಚರಣೆ ಜಾರಿಗೊಳಿಸುವ ಉz್ದೆÃಶದಿಂದ ಸೋಮವಾರ ಆಯೋಜಿಸಿದ್ದ ಮೊದಲ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇಂದ್ರ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಮೈ ಭಾರತ್ ಪೋರ್ಟಲ್ ಅನ್ನು ಯುವ ಜನರನ್ನು ಸ್ವಯಂ ಸೇವಾ ಅವಕಾಶ, ರಾಷ್ಟç ನಿರ್ಮಾಣದ ಚಟುವಟಿಕೆಗಳು, ಕೌಶಲಾಭಿವೃದ್ಧಿ, ನಾಯಕತ್ವ ಕಾರ್ಯಕ್ರಮಗಳನ್ನು ಮತ್ತು ವಿವಿಧ ಸರ್ಕಾರಿ ಯೋಜನೆಗಳೊಂದಿಗೆ ಸಂಪರ್ಕಿಸುವ ಮೂಲಕ ಸಬಲೀಕರಣಗೊಳಿಸಲು ಏಕೀಕೃತ ಡಿಜಿಟಲ್ ವೇದಿಕೆಯಾಗಿ ಸ್ಥಾಪಿಸಲಾಗಿದೆ. ಮೈ ಭಾರತ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವುದರಿMದ ರಾಷ್ಟ್ರೀಯ , ರಾಜ್ಯ ಹಾಗೂ ಜಿಲ್ಲಾ ಮಟ್ಟದ ವಿವಿಧ ಯುವ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗುವುದರಿಂದ ಜಿಲ್ಲೆಯ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಮೈ ಭಾರತ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕಿದೆ ಎಂದರು.
ಯುವ ಸಬಲೀಕರಣದಿಂದ ರಾಷ್ಟçöçದ ಪ್ರಗತಿ ಮತ್ತು ಸುಸ್ಥಿರ ಅಭಿವೃದ್ಧಿ ಸಾಧ್ಯವಾಗಲಿದೆ. ಎಲ್ಲ ಇಲಾಖೆಗಳು ಮೈ ಭಾರತ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವುದರಿAದ ಯುವ ಜನರಿಗಾಗಿ ಹಮ್ಮಿಕೊಳ್ಳಲಾಗುವ ಇಲಾಖಾ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಯುವಜನರು ಭಾಗವಹಿಸಲು ಸಾಧ್ಯವಾಗಲಿದೆ. ಅದರಲ್ಲೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ, ಪದವಿ ಪೂರ್ವ, ಪದವಿ, ಉನ್ನತ ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಜಿಲ್ಲಾ ಕೌಶಲ್ಯಾಭಿವÊದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಸಂಬAಧಿಸಿದ ಇಲಾಖೆಗಳು ಕಡ್ಡಾಯವಾಗಿ ಮೇರಾ ಯುವ ಭಾರತ್ (ಮೈ ಭಾರತ್) ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು ಹಾಗೂ ಯುವ ಜನರು, ಶಾಲಾಕಾಲೇಜು ವಿದ್ಯಾರ್ಥಿಗಳು ಮೈ ಭಾರತ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವAತೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು.
ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಮೈ ಭಾರತ್‌ನ ಬೆಂಗಳೂರು ದಕ್ಷಿಣ ಜಿಲ್ಲಾ ಯುವ ಅಧಿಕಾರಿ ಅರುಣಿಮಾ ಮಾತನಾಡಿ, ಯುವಜನರ ಆಂತರಿಕ ಸಾಮರ್ಥ್ಯವನ್ನು ಅಭಿವೃದ್ಧಿಗೊಳಿಸಲು ಹಾಗೂ ಅವರಿಗೆ ಆಸಕ್ತಿ ಇರುವ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸಿ, ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಅವಕಾಶ ಕಲ್ಪಿಸುವುದು. ಮೇರಾ ಯುವ ಭಾರತ್‌ನ (ಮೈ ಭಾರತ್) ಉದ್ದೇಶವಾಗಿದೆ . ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಇದುವರೆಗೂ 7,747 ಯುವ ಜನರು ಮಾತ್ರ ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿರುವ 15 ರಿಂದ 29 ವರ್ಷ ವಯಸ್ಸಿನ ಯುವ ಜನರು ಮೇರಾ ಯುವಭಾರತ್ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್, ಜಿಲ್ಲಾ ಶಸ್ತöçಚಿಕಿತ್ಸಕ ಡಾ. ಮಂಜುನಾಥ್, ಲೀಡ್ ಬ್ಯಾಂಕ್ ಮ್ಯಾನೇಜರ್ ಮೋಹನ್ ಮುಂತಾದವರು ಇದ್ದರು.
ಯುವ ಜನತೆಯಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಲು, ಯುವಜನರಿಗೆ ಶಿಕ್ಷಣ, ಕೌಶಲ, ಕ್ರೀಡೆ, ಸಾಂಸ್ಕೃತಿಕ ಹಾಗೂ ವೃತ್ತಿಪರ ತರಬೇತಿ ಮೂಲಕ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಹಾಗೂ ಕೇಂದ್ರರಾಜ್ಯ ಸರ್ಕಾರದ ವಿವಿಧ ಯೋಜನೆಗಳನ್ನು ಯುವಜನತೆಗೆ ತಲುಪಿಸಲು ಮೈ ಭಾರತ್ ಪೋರ್ಟಲ್ ಸಹಕಾರಿಯಾಗಲಿದೆ.
| ಆರ್.ಚಂದ್ರಯ್ಯ, ಅಪರ ಜಿಲ್ಲಾಧಿಕಾರಿ