ಕಬ್ಬಾಳಮ್ಮ ದೇವಾಲಯದ ಕೆರೆ ಉಳಿಸಿರಿ

ಕನಕಪುರ ತಾಲೂಕು ಸಾತನೂರು ಹೋಬಳಿ ಕಬ್ಬಾಳು ಗ್ರಾಮದ ಸರ್ವೇ ನಂ.2ರ ಸರ್ಕಾರಿ ಕೆರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸಾರ್ವಜನಿಕ ಶೌಚಗೃಹ ಕಾಮಗಾರಿ.
ಕನಕಪುರ ತಾಲೂಕು ಸಾತನೂರು ಹೋಬಳಿ ಕಬ್ಬಾಳು ಗ್ರಾಮದ ಸರ್ವೇ ನಂ.2ರ ಸರ್ಕಾರಿ ಕೆರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸಾರ್ವಜನಿಕ ಶೌಚಗೃಹ ಕಾಮಗಾರಿ.
Published on
ಕನಕಪುರ: ತಾಲೂಕಿನ ಸಾತನೂರು ಹೋಬಳಿ ಕಬ್ಬಾಳು ಗ್ರಾಮದ ಸರ್ವೇ ನಂ.2ರ ಸರ್ಕಾರಿ ಕೆರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ವಾಣಿಜ್ಯ ಸಂಕೀರ್ಣ ಹಾಗೂ ಸಾರ್ವಜನಿಕ ಶೌಚಗೃಹ ಕಾಮಗಾರಿಯನ್ನು ಕೂಡಲೇ ತಡೆದು ಕೆರೆಯನ್ನು ಉಳಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ರವಿಕುಮಾರ್​ ಆಗ್ರಹಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಸಿದ್ಧ ಗ್ರಾಮ ದೇವತೆ ಕಬ್ಬಾಳಮ್ಮ ದೇವಾಲಯದ ಸಮೀಪವಿರುವ ಕೆರೆ ಆವರಣದಲ್ಲಿ ಕೆಇಬಿ ಕಟ್ಟಡ ನಿರ್ಮಿಸಲಾಗಿದ್ದು, ಉಳಿದ ಜಾಗವನ್ನು ಮುಚ್ಚಿ ಆ ಸ್ಥಳದಲ್ಲಿ ವಾಣಿಜ್ಯ ಮಳಿಗೆ ಹಾಗೂ ಸಾರ್ವಜನಿಕ ಶೌಚಗೃಹ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಕೆರೆಯನ್ನು ಮುಚ್ಚಬಾರದೆಂಬ ಸುಪ್ರೀಂ ಆದೇಶವನ್ನು ಧಿಕ್ಕರಿಸಿ ನಿರ್ಮಿತಿ ಕೇಂದ್ರದಿಂದ ಕಾಮಗಾರಿ ನಡೆಯುತ್ತಿದೆ. ಕೂಡಲೇ ಕೆರೆಯ ಮೂಲ ಸ್ವರೂಪವನ್ನು ಉಳಿಸುವ ನಿಟ್ಟಿನಲ್ಲಿ ಕಾಮಗಾರಿ ನಿಲ್ಲಿಸಿ ವೆಚ್ಚವಾಗಿರುವ ಸರ್ಕಾರದ ಹಣವನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ವಸೂಲಿ ಮಾಡಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿಯಡಿ ಅರ್ಜಿ ಸಂಖ್ಯೆ ಡಬ್ಯೂ.ಪಿ:37497/2025ರಂತೆ ಪ್ರಕರಣ ದಾಖಲಿಸಿದ್ದು, ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಪತ್ರವನ್ನೂ ನೀಡಲಾಗಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net