

ರಾಮನಗರ: ಸಂಚಾರ ನಿಯಮ ಉಲ್ಲಂನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶೇ.50ರ ರಿಯಾಯಿತಿ ದಂಡ ಪಾವತಿಸಲು ರಾಜ್ಯ ಸರ್ಕಾರ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಈ ಬಗ್ಗೆ ಸಾರಿಗೆ ಸಂಚಾರ ಇ&ಚಲನ್ನಲ್ಲಿ ರಿಯಾಯಿತಿ ನೀಡಿ ಆದೇಶಿಸಿದ್ದು, ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಎಚ್. ಅಣ್ಣಯ್ಯನವರ ತಿಳಿಸಿದರು.
ರಾಮನಗರ ಜಿಲ್ಲಾ ನ್ಯಾಯಾಲಯ ಸಭಾಗಂಗಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಿಯಾಯಿತಿಯಲ್ಲಿ ಸಂಚಾರಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ನ.21ರಿಂದ ಡಿ.11ರವರೆಗೆ ಕಾಲಾವಕಾಶ ನೀಡಲಾಗಿದೆ. ಪ್ರಕರಣ ಬಾಕಿ ಉಳಿಸಿಕೊಂಡಿರುವ ವಾಹನಗಳ ಮಾಲೀಕರು, ಸಾರ್ವಜನಿಕರು, ಕದಾರರು 20 ದಿನಗಳ ಕಾಲ ನೀಡಿರುವ ಕಾಲಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಪೊಲೀಸ್ ಇಲಾಖೆಯ 2026ರ ನವೆಂಬರ್ ಮೊದಲಿನ ಟ್ರಾಫಿಕ್ ಚಲನ್ ಪ್ರಕರಣಗಳು ಮತ್ತು ಸಾರಿಗೆ ಇಲಾಖೆಗೆ ಸಂಬಂಧಿಸಿದ 1991ರಿಂದ 2026ರಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡಿ ಆದೇಶಿಸಲಾಗಿದೆ ಎಂದರು.
ಶೇ.50 ದಂಡ ರಿಯಾಯಿತಿ ಸೌಲಭ್ಯವು ನ.21ರಿಂದ ಡಿ.11ರವರೆಗೆ ಜಾರಿಯಲ್ಲಿರಲಿದ್ದು, 20 ದಿನಗಳಲ್ಲಿಚಾಲಕರು ತಮ್ಮ ಬಾಕಿ ದಂಡವನ್ನು ಅರ್ಧ ಮೊತ್ತಕ್ಕೆ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದವರು ತಿಳಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಪಿ.ಆರ್. ಸವಿತಾ ಇದ್ದರು.
------------------------------------------
ಪೊಲೀಸ್ ಇಲಾಖೆಯಂತೆಯೇ ಸಾರಿಗೆ ಇಲಾಖೆ ಪ್ರಕರಣಗಳ ಬಾಕಿ ದಂಡ ಪಾವತಿಗೂ ವಿನಾಯಿತಿ ನೀಡಲಾಗಿದೆ. ಸಂಚಾರ ನಿಯಮ ಉಲ್ಲಂನೆಯ ಬಾಕಿ ಪ್ರಕರಣಗಳ ದಂಡದ ಮೊತ್ತ ಪಾವತಿಯುಲ್ಲಿ ಶೇ.50 ರಿಯಾಯಿತಿ ನೀಡಲಾಗಿದ್ದು, ಸಂಬಂಧಿಸಿದ ಆರ್ಟಿಒ ಕಚೇರಿ ಹಾಗೂ ಪೊಲೀಸ್ ಠಾಣೆಗಳಿಗೆ ತೆರಳಿ ಬಾಕಿ ದಂಡ ಪಾವತಿಸುವ ಮೂಲಕ ರಿಯಾಯಿತಿ ಪಡೆಯಬಹುದು.
- ಎಂ.ಎಚ್.ಅಣ್ಣಯ್ಯನವರ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ರಾಮನಗರ
------------------------------------------
ಸಾರ್ವಜನಿಕರ ಅನುಕೂಲಕ್ಕಾಗಿ ನ್ಯಾಯಾಲಯದ ಮುಂಭಾಗದಲ್ಲಿ ರಸ್ತೆ ಬಳಿ ವಿಶೇಷ ಕೌಂಟರ್ ಸ್ಥಾಪಿಸಲಾಗುವುದು. ಸಾರ್ವಜನಿಕರು ಕೌಂಟರ್ಗೆ ಭೇಟಿ ನೀಡಿ ತಮ್ಮ ವಾಹನಗಳಿಗೆ ಸಂಬಂಧಿಸಿದ ಬಾಕಿ ಇರುವ ಸಂಚಾರಿ ನಿಯಮ ಉಲ್ಲಂನೆಯ ದಂಡದ ಮೊತ್ತವನ್ನು ಪಾವತಿಸಿ ರಿಯಾಯಿತಿ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು.
- ಪಿ.ಆರ್.ಸವಿತಾ, ಹಿರಿಯ ಸಿವಿಲ್ ನ್ಯಾಯಾಧೀಶೆ, ರಾಮನಗರ