ದೇಶದ ಆಡಳಿತ ವ್ಯವಸ್ಥೆಗೆ ಸಂವಿಧಾನ ಮಾರ್ಗದರ್ಶನ

ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕಾಳಯ್ಯ ಹೇಳಿಕೆ
ರಾಮನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸಂವಿಧಾನ ದಿನದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕಾಳಯ್ಯ, ಜಿಲ್ಲಾಧ್ಯಕ್ಷ ಆನಂದ್​ಸ್ವಾಮಿ, ತಾಲೂಕು ಅಧ್ಯಕ್ಷ ಗೌತಮ್​ಗೌಡ, ಪ್ರಾಧಿಕಾರ ಮಾಜಿ ಅಧ್ಯಕ್ಷ ಎಸ್​.ಆರ್​. ನಾಗರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್​ ಇತರರಿದ್ದರು.

Published on: 

ರಾಮನಗರ : ಸಂವಿಧಾನವು ದೇಶದ ಆಡಳಿತ ವ್ಯವಸ್ಥೆಗೆ ಮಾರ್ಗದರ್ಶನ ನೀಡುವುದರ ಜತೆಗೆ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ$್ಯ, ನ್ಯಾಯ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಸಾರುತ್ತದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕಾಳಯ್ಯ ತಿಳಿಸಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂವಿಧಾನ ಸಮರ್ಪಣಾ ದಿನದಲ್ಲಿ ಮಾತನಾಡಿದ ಅವರು, ಡಾ. ಬಿ.ಆರ್​. ಅಂಬೇಡ್ಕರ್​ ರಚಿಸಿ ಭಾರತ ಸಂವಿಧಾನವು ವಿಶ್ವದ ಅತಿದೊಡ್ಡ ಲಿಖಿತ ಸಂವಿಧಾನಗಳಲ್ಲಿ ಒಂದಾಗಿದೆ. 1949ರ ನ.26ರಂದು ಸಂವಿಧಾನ ಅಂಗೀಕಾರಗೊಂಡಿತು. ಈ ಐತಿಹಾಸಿಕ ದಿನದ ಸ್ಮರಣಾರ್ಥ ಪ್ರತಿವರ್ಷ ಈ ದಿನದಂದು ಸಂವಿಧಾನ ದಿನ ಆಚರಿಸಲಾಗುತ್ತದೆ ಎಂದರು.

ಸಂವಿಧಾನವು ಕೇವಲ ಕಾನೂನುಗಳ ಪುಸ್ತಕವಲ್ಲ. ಅದು ದೇಶದ ಪ್ರತಿಯೊಬ್ಬ ಪ್ರಜೆಯ ಹಕ್ಕು, ಕರ್ತವ್ಯ ಮತ್ತು ಗೌರವವನ್ನು ಎತ್ತಿಹಿಡಿಯುವ ಮಹತ್ವದ ಮಾರ್ಗದರ್ಶಿಯಾಗಿದೆ. ಸಂವಿಧಾನದ ಆಶಯಗಳನ್ನು ಅರಿತು, ಅವುಗಳನ್ನು ದೈನಂದಿನ ಬದುಕಿನಲ್ಲಿ ಪಾಲಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸಬೇಕಿದೆ ಎಂದರು.

ಜಿಲ್ಲಾಧ್ಯಕ್ಷ ಆನಂದ್​ಸ್ವಾಮಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನಶಿಲ್ಪಿ ಡಾ.ಬಿ.ಆರ್​.ಅಂಬೇಡ್ಕರ್​ ಅವರ ಹುಟ್ಟು, ಬೆಳವಣಿಗೆ ವಿದ್ಯಾಭ್ಯಾಸ ಸೇರಿದಂತೆ ಎಲ್ಲ ಸ್ಥಳವನ್ನು ರಾಷ್ಟ್ರೀಕರಣ ಮಾಡಿದೆ ಎಂದು ತಿಳಿಸಿದರು.

ಕಚೇರಿಯಲ್ಲಿ ಕಾರ್ಯಕ್ರಮ ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಡಾ.ಬಿ.ಆರ್​. ಅಂಬೇಡ್ಕರ್​ ಪ್ರತಿಮೆಗೆ ಬಿಜೆಪಿ ಪದಾಧಿಕಾರಿಗಳು ಮಾರ್ಲಾಪಣೆ ಮಾಡಿದರು.

ರಾಜ್ಯ ಬಿಜೆಪಿ ವಕ್ತಾರ ರುದ್ರದೇವರು, ಮುಖಂಡರಾದ ರಾಜು, ಚಂದನ್​ಮೋರೆ, ಲಕ್ಷಿ$್ಮ, ಪ್ರವಿಣ್​ಗೌಡ, ಗೂಗಾರೆದೊಡ್ಡಿ ನಾಗರಾಜು, ಸುರೇಶ್​, ಕಿಶನ್​, ರಾಮಕೃಷ್ಣ, ರಂಗಸ್ವಾಮಿ, ವರುಣ್​, ರಾವೇಂದ್ರ, ನಂದೀಶ, ಡಿ.ರಾಜು, ನಾಗೇಶ್​, ಕಚೇರಿ ಕಾರ್ಯಾಲಯದ ಕಾರ್ಯದರ್ಶಿ ಚೆನ್ನಪ್ಪ ಸೇರಿದಂತೆ ಹಲವರು ಇದ್ದರು.

ಆರ್​ಎಂಜಿ 1 ಸಂವಿಧಾನ