ನೆರೆ ರಾಜ್ಯಗಳಲ್ಲಿ ಸಹಕಾರ ಕ್ಷೇತ್ರ ಬಲಿಷ್ಠ

ರಾಮನಗರಲ್ಲಿ ಆಯೋಜಿಸಿದ್ದ ಸಹಕಾರ ಸಪ್ತಾಹ ಆಚರಣೆ ಕಾರ್ಯಕ್ರಮದಲ್ಲಿ ಇಲಾಖೆ ನಿಬಂಧಕ ಡಾ.ಎಂ.ವಿ. ವೆಂಕಟೇಶ್ ಚಾಲನೆ ನೀಡಿದರು.
ರಾಮನಗರಲ್ಲಿ ಆಯೋಜಿಸಿದ್ದ ಸಹಕಾರ ಸಪ್ತಾಹ ಆಚರಣೆ ಕಾರ್ಯಕ್ರಮದಲ್ಲಿ ಇಲಾಖೆ ನಿಬಂಧಕ ಡಾ.ಎಂ.ವಿ. ವೆಂಕಟೇಶ್ ಚಾಲನೆ ನೀಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಸಹಕಾರ ಸಂಗಳ ನಿಬಂಧಕ ಡಾ. ಎಂ.ವಿ. ವೆಂಕಟೇಶ್ ಹೇಳಿಕೆ
  • ರಾಮನಗರದಲ್ಲಿ ನಡೆದ ಸಹಕಾರ ಸಪ್ತಾಹ
ರಾಮನಗರ
ಮನುಷ್ಯ ಹುಟ್ಟಿನಿಂದ ಸಾವಿನವರೆಗೂ ಸಹಕಾರದಿಂದಲೇ ಜೀವನ ನಡೆಸುತ್ತಾನೆ. ಮನುಷ್ಯನಿಗೂ ಹಾಗೂ ಸಹಕಾರಕ್ಕೂ ಅವಿನಾಭಾವ ಸಂಬಂಧವಿದ್ದು, ಮಾನವನ ಪ್ರತೀ ಚಟುವಟಿಕೆಯಲ್ಲೂ ಸಹಕಾರ ಇಲಾಖೆಯ ಅವಲಂಭನೆ ಇರುತ್ತದೆ. ಸಹಕಾರದಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಸಹಕಾರ ಇಲಾಖೆಯ ಸಹಕಾರ ಸಂಗಳ ನಿಬಂಧಕ ಡಾ. ಎಂ.ವಿ. ವೆಂಕಟೇಶ್ ತಿಳಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಸಹಕಾರ ಇಲಾಖೆ, ಬೆಂಗಳೂರಿನ ರಾಜ್ಯ ಸಹಕಾರ ಮಹಾಮಂಡಳಿ, ಬೆಂಗಳೂರು ದಕ್ಷಿಣ ಜಿಲ್ಲಾ ಸಹಾರ ಒಕ್ಕೂಟ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ಎಲ್ಲ ಸಹಕಾರ ಸಂಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಹಕಾರ ಸಪ್ತಾಹ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಾತನಾಡಿದರು.
ಸಹಕಾರ ಕ್ಷೇತ್ರದ ಮಹತ್ವ ತಿಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರವು ಪ್ರತೀ ವರ್ಷ ಸಹಕಾರಿ ಸಪ್ತಾಹ ಕಾರ್ಯಕ್ರಮ ಆಯೋಜಿಸುತ್ತಿದೆ. ರೈತರ ವಿಕಾಸ, ಬಡತನ ನಿರ್ಮೂಲನೆ, ಗ್ರಾಮೀಣ ಆರ್ಥಿಕ ಪ್ರಗತಿ ಸೇರಿ ಒಟ್ಟಾರೆ ದೇಶದ ಅಭಿವೃದ್ಧಿಯಲ್ಲಿ ಸಹಕಾರ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.
ಮಹಾರಾಷ್ಟ್ರ, ಗುಜರಾತ್ ಹಾಗೂ ಕೇರಳ ರಾಜ್ಯಗಳಲ್ಲಿ ಸಹಕಾರ ಕ್ಷೇತ್ರ ಅತ್ಯಂತ ಬಲಿಷ್ಠವಾಗಿದೆ. ಪೂರ್ವ ರಾಜ್ಯಗಳಾದ ಒರಿಸ್ಸಾ, ಬಿಹಾರ, ಅಸ್ಸಾಂನಲ್ಲಿ ಸಹಕಾರ ಕ್ಷೇತ್ರ ಮಹತ್ವ ಪಡೆದಿಲ್ಲ. ರೈತರ ತಲಾ ಆದಾಯ, ರಾಷ್ಟ್ರೀಯ ಉತ್ಪನ್ನ (ಜಿಡಿಪಿ), ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ಹಾಗೂ ದೇಶದ ಅಭಿವೃದ್ಧಿಗೆ ಸಹಕಾರ ಸಂಘಗಳು ಪ್ರಮುಖ ಪಾತ್ರವಹಿಸುತ್ತವೆ. ಆದ್ದರಿಂದ ದೇಶಾದ್ಯಂತ ಸಹಕಾರ ಸಂಸ್ಥೆಗಳನ್ನು ಇನ್ನಷ್ಟು ಸದೃಢಗೊಳಿಸುವ ಅಗತ್ಯವಿದೆ ಎಂದು ತಿಳಿಸಿದರು.
ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಚ್.ಎನ್. ಅಶೋಕ್ ವಾತನಾಡಿ, ಸರ್ಕಾರಿ ನೌಕರರ ವೇತನ, ಸರ್ಕಾರಿ ವಹಿವಾಟುಗಳೆಲ್ಲವೂ ಜಿಲ್ಲಾ ಮಟ್ಟದ ಡಿಸಿಸಿ ಬ್ಯಾಂಕ್‌ಗಳ ಮೂಲಕ ನಡೆಯುವಂತಾದರೆ ಸಹಕಾರಿ ಬ್ಯಾಂಕುಗಳ ಬೆಳವಣಿಗೆಯಾಗಲಿವೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರಕ್ಕೆ ಹೆಚ್ಚಿನ ಅವಕಾಶವಿದೆ. ಬಮುಲ್ ವ್ಯಾಪ್ತಿಯಲ್ಲಿ ಹಾಲು ಉತ್ಪಾದನೆಯಲ್ಲಿ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯು ಮುಂಚೂಣಿಯಲ್ಲಿದೆ ಎಂದು ಹೇಳಿದರು.
ಬೆಂಗಳೂರು ದಕ್ಷಿಣ ಜಿಲ್ಲೆಯ ಸಹಕಾರ ಒಕ್ಕೂಟದ ಅಧ್ಯಕ್ಷ ಧನಂಜಯ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಮಂಜು, ಲಿಂಗೇಶ್ ಕುವಾರ್, ಜೆಆರ್‌ಸಿಎಸ್ ಡಾ. ಉಮೇಶ್, ಜಂಟಿ ನಿಬಂಧಕ ಪುಂಡಲೀಕ ಎಲ್. ಸಾಯಿರೆ, ಬೆಂಗಳೂರು ದಕ್ಷಿಣ ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕರಾದ ಚಂದ್ರೇಗೌಡ, ರಾಜಣ್ಣ, ಕ್ಯಾಸಾಪುರ ಶ್ರೀಧರ್, ಕೆ.ಪಿ. ಅಪರ ನಿವೃತ್ತ ನಿಬಂಧಕ ಗುರುಸ್ವಾಮಿ, ಸಹಕಾರ ಉಪನಿಬಂಧಕರಾದ ಕವಿತಾ, ಸಹಾಯಕ ನಿಬಂಧಕ ಪ್ರದೀಪ್ ಕುವಾರ್, ಸಹಕಾರ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಜಿಲ್ಲೆಯ ಎಲ್ಲ ತಾಲೂಕಿನ ವಿವಿದ್ದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಇದ್ದರು.

25ಕ್ಕೂ ಹೆಚ್ಚು ವಿವಿಧ ಸೇವೆ

ರಾಜ್ಯದ ಪ್ರತಿ ಗ್ರಾಮಗಳಲ್ಲಿಯೂ ಸಹಕಾರ ಸಂಸ್ಥೆಗಳನ್ನು ಶಕ್ತಿಕೇಂದ್ರಗಳಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಸಾಲ ನೀಡುವ ಸಂಸ್ಥೆಗಳಷ್ಟೆ ಅಲ್ಲದೆ 25ಕ್ಕೂ ಹೆಚ್ಚು ವಿವಿಧ ಸೇವೆಗಳನ್ನು ಒದಗಿಸುವ ಬಹುದ್ದೇಶದ ವಾಣಿಜ್ಯ ಕೇಂದ್ರಗಳಾಗಿ ಸಹಕಾರ ಸಂಸ್ಥೆಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಸಹಕಾರ ಇಲಾಖೆಯ ಸಹಕಾರ ಸಂಗಳ ನಿಬಂಧಕ ಡಾ. ಎಂ.ವಿ. ವೆಂಕಟೇಶ್ ತಿಳಿಸಿದರು. ರೈತರ ಅಗತ್ಯಗಳನ್ನು ಪೂರೈಸುವಲ್ಲಿ ಸಹಕಾರ ಇಲಾಖೆಯ ಪಾತ್ರ ಮಹತ್ವದ್ದಾಗಿದ್ದು, ಈ ದಿಸೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಗಳ ಮೂಲಕ ವೈವಿದ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದು. ದೇಶದಲ್ಲಿಯೇ ರಾಜ್ಯ ಸಹಕಾರ ಕ್ಷೇತ್ರವನ್ನು ಸದೃಢವನ್ನಾಗಿಸಲು ಸಹಕಾರ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವವರು ದಕ್ಷತೆಯಿಂದ ಪ್ರಾವಾಣಿಕವಾಗಿ ಕೆಲಸ ವಾಡಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net