ಕುದೂರು: ನೆಲಮಂಗಲ ಸಮೀಪ ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಫೆ.3ರಂದು ನೆಲಮಂಗಲ ಸಮೀಪದ ಮಹದೇವಪುರ ಬಳಿ ಬೈಕ್ ನಿಯಂತ್ರಣ ತಪ್ಪಿ ತಲೆಗೆ ತೀವ್ರವಾಗಿ ಗಾಯವಾಗಿತ್ತು. ತೀವ್ರ ರಕ್ತಸ್ರಾವ ಆಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೇ ಸೋಮವಾರ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಪುತ್ರಿ, ತಾಯಿ ಇದ್ದಾರೆ. ಅಂತ್ಯಕ್ರಿಯೆ ಮಂಗಳವಾರ ಸ್ವಗ್ರಾಮ ಅಜ್ಜಹಳ್ಳಿಯಲ್ಲಿ ನಡೆಯಿತು.