ಮೂವರು ಸರಗಳ್ಳರ ಬಂಧನ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಚನ್ನಪಟ್ಟಣ: ನಗರದಲ್ಲಿ ಮಹಿಳೆಯ ಮಾಂಗಲ್ಯ ಸರ ಕಳವು ಮಾಡಿದ್ದ ಮೂವರು ಅಂತರಜಿಲ್ಲಾ ಸರಗಳ್ಳರನ್ನು ಪುರ ವೃತ್ತ ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ರುಮಾನ್​ ಪಾಷಾ, ಸೈಯದ್​ ಅಭೀದ್​ ಹಾಗೂ ಮೊಹಮ್ಮದ್​ ಜುನೈದ್​ ಪಾಷಾ ಬಂಧಿತರು.
ಮಾರ್ಚ್​ 16ರಂದು ನಗರದ ಕಾಶಿ ವಿಶ್ವನಾಥ ದೇವಾಲಯದಿಂದ ಮನೆಗೆ ಮರಳುತ್ತಿದ್ದ ಸುನಂದಾ ಎಂಬ ಮಹಿಳೆಯ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ ಬಂದಿದ್ದ ಅಪರಿಚಿತರು ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಪುರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ತಾಂತ್ರಿಕ ಮಾಹಿತಿ ಹಾಗೂ ಖಚಿತ ಸುಳಿವು ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ <4.5 ಲ ಮೌಲ್ಯದ 33.62 ಗ್ರಾಂ ತೂಕದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net