ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಕಾಲಕಾಲಕ್ಕೆ ಬಣ್ಣ ಬದಲಾಯಿಸಿಕೊಂಡು ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು. ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ರೈತರು ಹೋರಾಟ ಮಾಡುತ್ತಿದ್ದಾರೆಂದು ಇಲ್ಲಿವರೆಗೆ ಭಾವಿಸಿದ್ದೆವು. ಆದರೆ, ಅಲ್ಲಿ ಹೋರಾಟ ಮಾಡುತ್ತಿರುವುದು ರೈತರಲ್ಲ, ಜೆಡಿಎಸ್ನವರು ಎಂಬುದು ಸ್ಪಷ್ಟವಾಗಿದೆ. ರೈತರ ಹೆಸರಿನಲ್ಲಿ ಜೆಡಿಎಸ್ನವರು ನಡೆಸುತ್ತಿರುವ ರಾಜಕೀಯ ಹೋರಾಟಕ್ಕೆ ನಾವೂ ರಾಜಕೀಯವಾಗಿಯೇ ಪ್ರತ್ಯುತ್ತರ ನೀಡುತ್ತೇವೆ ಎಂದು ಎಚ್ಚರಿಸಿದರು.