ಮರ ಕಡಿದು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ವಶ

ಯಲವನಾಥ್​ ಎನ್​.ಎ. ಬ್ಲಾಕ್​ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಕಡಿದು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನ್ನು ವಶಕ್ಕೆ ಪಡೆದಿರುವುದು.
ಯಲವನಾಥ್​ ಎನ್​.ಎ. ಬ್ಲಾಕ್​ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಕಡಿದು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನ್ನು ವಶಕ್ಕೆ ಪಡೆದಿರುವುದು.
Published on
ಕನಕಪುರ: ತಾಲೂಕಿನ ಯಲವನಾಥ ಎನ್​.ಎ. ಬ್ಲಾಕ್​ ಅರಣ್ಯ ಪ್ರದೇಶದಲ್ಲಿ ಮರ ಕಡಿದು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಅನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
ಅರಣ್ಯ ಪ್ರದೇಶದಲ್ಲಿ ಭಾರಿಗಾತ್ರದ ಮರವನ್ನು ಕಡಿದು ಟ್ರ್ಯಾಕ್ಟರ್​ನಲ್ಲಿ ತುಂಬಿ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿ ಅಂಥೊನಿ ಹಾಗೂ ಉಪವಲಯ ಅರಣ್ಯಾಧಿಕಾರಿ ಲಕ್ಷ್ಮೀಕಾಂತ್ ಸ್ಥಳಕ್ಕೆ ಧಾವಿಸಿ ಮರ ತುಂಬಿದ್ದ ಟ್ರ್ಯಾಕ್ಟರ್ ವಶಕ್ಕೆ ಪಡೆದು, ಸುರೇಶ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗಸ್ತುಪಾಲಕ ಗಂಗಾಧರ್​ ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net