ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಚಂದನ್ ಮತ್ತು ಮಹೇಶ್ ಭಾನುವಾರ ರಾತ್ರಿ ಬೆಂಗಳೂರಿನಿಂದ ಕುಣಿಗಲ್ ಮಾರ್ಗವಾಗಿ ಬೈಕ್ ರೈಡ್ ಹೋಗುತ್ತಿದ್ದಾಗ ನಿಂತಿದ್ದ ಟ್ಯ್ರಾಕ್ಟರ್ಗೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ಚಂದನ್ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೆ ಮೃತಪಟ್ಟರೆ, ತೀವ್ರ ಗಾಯಗೊಂಡಿದ್ದ ಮಹೇಶ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.