ವಿಎಸ್ಸೆಸ್ಸೆನ್​ ಕಾರ್ಯದರ್ಶಿ ಶಿವರಾಜ್​ ಸಾವು

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಬಿಡದಿ: ಹಾರೋಹಳ್ಳಿ ಮುಖ್ಯರಸ್ತೆಯ ಅಬ್ಬನಕುಪ್ಪೆ ಬಳಿ ಲಾರಿ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಹಾರೋಹಳ್ಳಿ ತಾಲೂಕಿನ ಮರಸನಹಳ್ಳಿ ಶಿವರಾಜ್​ (48) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶಿವರಾಜ್​ ಅವರು ಬೈರಮಂಗಲ ವಿಎಸ್ಸೆಸ್ಸೆನ್​ನಲ್ಲಿ ಕಾರ್ಯದರ್ಶಿಯಾಗಿದ್ದರು. ಬೈರಮಂಗಲದಿಂದ ಕೈಗಾರಿಕಾ ಪ್ರದೇಶದತ್ತ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಬೈಕ್​ನಿಂದ ರಸ್ತೆಗೆ ಬಿದ್ದ ಶಿವರಾಜು ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ. ಮೃತ ದೇಹವನ್ನು ಮರಣೋತ್ತರ ಪರೀೆಗೆ ರಾಮನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಬಿಡದಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net