ತಾಲೂಕಿನ ಹೊನ್ನಾನಾಯಕಹಳ್ಳಿಯ ಜಯಮ್ಮ (55) ಕೆಲಸ ನಿಮಿತ್ತ ನಗರಕ್ಕೆ ಬಂದಿದ್ದು, ಗ್ರಾಮಕ್ಕೆ ತೆರಳಲು ನಿಲ್ದಾಣಕ್ಕೆ ಆಗಮಿಸಿದ್ದರು. ಕೆಸ್ತೂರು ಮಾರ್ಗದ ಬಸ್ ನಿಲ್ದಾಣಕ್ಕೆ ಬಂದಾಗ ಸೀಟಿಗಾಗಿ ಕರವಸ ಹಾಕಲು ಯತ್ನಿಸಿದ್ದಾರೆ. ಈ ವೇಳೆ ನೂಗುನುಗ್ಗಲಿನಲ್ಲಿ ಕೆಳಗೆ ಬಿದ್ದಿದ್ದಾರೆ. ಆಗ ಬಸ್ಸಿನ ಹಿಂದಿನ ಚಕ್ರಕ್ಕೆ ಕೈ ಸಿಲುಕಿ, ಕೈ ಸಂಪೂರ್ಣ ನಜ್ಜುಗುಜ್ಜಾಗಿದೆ. ಕೂಡಲೇ ಇವರನ್ನು ನಗರದ ಸಾರ್ವಜನಿಕ ಆಸ್ಪತ್ರೆ ಸಾಗಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.