

ಬಿಡದಿ :
ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು ವಾನಸಿಕ ಸದೃಢತೆ, ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಬೆಳೆಸುವುದರ ಜತೆಗೆ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಮಹತ್ವ ಪಾತ್ರ ವಹಿಸುತ್ತದೆ ಎಂದು ಸಚಿವ ಎಚ್.ಸಿ. ಬಾಲಕೃಷ್ಣ ಅಭಿಪ್ರಾಯಪಟ್ಟರು.
ಬಿಡದಿಯ ಐಕಾನ್ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಥ್ರೋಬಾಲ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ವಾತನಾಡಿ, ಕ್ರೀಡೆ ವಿದ್ಯಾರ್ಥಿ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದ್ದು, ಶಿಕ್ಷಣ ಜತೆಗೆ ಕ್ರೀಡೆಗೂ ಸವಾನ ಆದ್ಯತೆ ನೀಡಬೇಕು ಎಂದರು.
ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಗೆ ಸೀಮಿತವಾಗದೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸೇರಿ ವಿವಿಧ ಕ್ಷೇತ್ರಗಳಲ್ಲಿಯೂ ಪ್ರತಿಭೆ ಪ್ರದರ್ಶಿಸಬೇಕು. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಆರೋಗ್ಯ ಸುಧಾರಿಸುವುದರ ಜತೆಗೆ ವಾನಸಿಕ ಸ್ಥೈರ್ಯ ವೃದ್ಧಿಯಾಗುತ್ತದೆ. ಸೋಲು-ಗೆಲುವು ಸವಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಂಡು, ನಿರಂತರ ಅಭ್ಯಾಸದ ಮೂಲಕ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದರು.
ವಿಧಾನ ಪರಿಷತ್ ವಾಜಿ ಸದಸ್ಯ ಸಿ.ಎಂ.ಲಿಂಗಪ್ಪ ವಾತನಾಡಿ, ಗ್ರಾಮೀಣ ಪ್ರತಿಭಾವಂತ ಕ್ರೀಡಾಪಟುಗಳು ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ವೇದಿಕೆ. ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ, ಪಾಲಕರ ಹಾಗೂ ಸವಾಜದ ಮೇಲಿದೆ ಎಂದರು. ಜಿಬಿಡಿಎ ವಾಜಿ ಅಧ್ಯಕ್ಷ ಗಾಣಕಲ್ ನಟರಾಜ್, ತಾಪಂ ವಾಜಿ ಅಧ್ಯಕ್ಷ ಮಹದೇವಪ್ಪ, ಮುಖಂಡ ರಮೇಶ್ ಇತರರು ಇದ್ದರು.
18 ಬಿಡದಿ ಐಕಾನ್ ಕಾಲೇಜು 1
ಬಿಡದಿಯ ಐಕಾನ್ ಕಾಲೇಜಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಥ್ರೋಬಾಲ್ ಕ್ರೀಡಾಕೂಟಕ್ಕೆ ಸಚಿವ ಎಚ್.ಸಿ.ಬಾಲಕೃಷ್ಣ ಚಾಲನೆ ನೀಡಿದರು. ಬಮುಲ್ ನಿರ್ದೇಶಕ ಪಿ.ನಾಗರಾಜು, ವಾಜಿ ಶಾಸಕ ಕೆ. ರಾಜು, ಜಿಬಿಡಿಎ ಅಧ್ಯಕ್ಷ ಎಲ್.ಚಂದ್ರಶೇಖರ್ ಇದ್ದರು.
ಮತ್ತು 2
ಐಕಾನ್ ಕಾಲೇಜು ಆಡಳಿತ ಮಂಡಳಿಯಿಂದ ಸಚಿವ ಎಚ್.ಸಿ.ಬಾಲಕೃಷ್ಣ ಅವರನ್ನು ಸನ್ಮಾನಿಸಲಾಯಿತು.