ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಹಾಗೂ ಹೊಸಕೋಟೆ ತಾಲೂಕುಗಳನ್ನೊಳಗೊಂಡ ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ 15 ವರ್ಷಗಳಿಂದ ನಿವೇಶನಕ್ಕಾಗಿ ಜನ ಜಾತಕ ಪಕ್ಷಿಯಂತೆ ಎದುರು ನೋಡುತ್ತಿದ್ದಾರೆ. ಸರ್ಕಾರದ ಹಲವು ಯೋಜನೆಗಳಡಿ ನಿವೇಶನ ವಸತಿಗಾಗಿ ಅರ್ಜಿಗಳನ್ನು ಹಾಕಿ ಕುಳಿತರೂ ಇದುವರೆಗೆ ಕನಸು ನನಸಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇದರ ನಡುವೆ ಈ ಬಾರಿ ವಸತಿ ವಿತರಣೆಗೆ ಜಿಲ್ಲಾಡಳಿತ ಮುಂದಾಗಿರುವುದು ಈ ಬಾರಿಯಾದರೂ ಬಡಜನರ ಕನಸು ನನಸಾಗಲಿದೆ ಎಂಬ ಭರವಸೆ ಮೂಡಿಸಿದೆ.