ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ

accident
accident
Published on
ವಿಜಯವಾಣಿ ಸುದ್ದಿಜಾಲ ಕುಂದಾಣ
ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಸೋಮವಾರ ವಾಹನಗಳ ಸರಣಿ ಅಪಘಾತದಲ್ಲಿ ಬೈಕ್ ಸವಾರನಿಗೆ ಕಾಲು ತುಂಡಾಗಿದೆ.
ಸಾವಕನಹಳ್ಳಿ ನಿವಾಸಿ ಮ್ಯಾಥ್ಯು (45) ಕಾಲು ಕಳೆದುಕೊಂಡಿದ್ದು ತಲೆಗೂ ತೀವ್ರ ಪೆಟ್ಟಾಗಿದೆ.
ಬೆಂಗಳೂರಿನ ಭಾಸ್ಕರ್ ಎಂಬುವರ ಕುಟುಂಬ ಮಂತ್ರಾಲಯಕ್ಕೆ ತೆರಳಿ ವಾಪಸ್ ಬರುತ್ತಿರುವ ವೇಳೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಮುಂದೆ ಚಲಿಸುತ್ತಿದ್ದ ಬೈಕ್‌ಗೆ ಡಿಕ್ಕಿಯೊಡೆದಿದೆ. ಬಳಿಕ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ರಸ್ತೆಯಲ್ಲಿ ಮಗುಚಿ ಬಿದ್ದಿದೆ. ಈ ಅಪಘಾತದ ದೃಶ್ಯ ಹೆದ್ದಾರಿಯಲ್ಲಿನ ಸಿಸಿ ಕ್ಯಾಮರಾರದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದವರಿಗೆ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೀವ್ರ ಗಾಯಗೊಂಡ ಬೈಕ್ ಸವಾರನನ್ನು ದೇವನನಹಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಶ್ವನಾಥಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಭಾಸ್ಕರ್ ಎಂಬುವರ ಪತ್ನಿ ಕಾರು ಚಾಲನೆ ಮಾಡುತ್ತಿದ್ದರು ಈ ವೇಳೆ ನಿಯಂತ್ರಣ ತಪ್ಪಿ ನಿಧಾನವಾಗಿ ಮುಂದೆ ಸಾಗುತ್ತಿದ್ದ ಬೈಕ್‌ಗೆ ಡಿಕ್ಕಿಯೊಡೆದಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net