ದೊಡ್ಡಬಳ್ಳಾಪುರದ ಫಾಕ್ಸ್‌ಕಾನ್ ಕಂಪನಿಯು ಸದ್ಯ 30 ಸಾವಿರ ಜನರಿಗೆ ಉದ್ಯೋಗ ನೀಡಿದ್ದು, ಇದರಲ್ಲಿ ಶೇ.80 ಮಂದಿ ಮಹಿಳೆಯರೇ ಇರುವುದು ಸಂತಸದ ಸಂಗತಿ. ಇದೇ ರೀತಿ ಮುಂದಿನ ದಿನಗಳಲ್ಲಿ ಇನ್ನೂ 20 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಚೀನಾ ಮತ್ತು ವಿಯೆಟ್ನಾಂ ರೀತಿ ತಯಾರಿಕಾ ವಲಯದಲ್ಲಿ ಮುಂಚೂಣಿಗೆ ತರುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು. ಕಾರ್ಯಕ್ರಮದ ನಂತರದ ಸ್ಥಳೀಯ ಉದ್ಯಮಿಗಳ ಜತೆಗೂ ಸಚಿವರು ಮಾತನಾಡಿದರು. ಕೆಲವರು ತಮ್ಮ ಉದ್ಯಮ ವಿಸ್ತರಿಸಲು ಭೂಮಿ ಕೇಳುತ್ತಿದ್ದು, ಇದನ್ನು ಲಭ್ಯವಾಗಿಸುವ ಪ್ರಯತ್ನ ಮಾಡಲಿದ್ದೇನೆ ಎಂದು ಭರವಸೆ ನೀಡಿದರು.