ಸಂವಿಧಾನ ಶಿಲ್ಪಿಯ ಆದರ್ಶ ರೂಢಿಸಿಕೊಳ್ಳಬೇಕು

ambedkar jayanti
ambedkar jayanti
Published on
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆ, ಸಾಧನೆಯನ್ನು ಓದಿದರಷ್ಟೇ ಸಾಲದು, ಅವರ ಸಂದೇಶ, ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧಾ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ135 ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತ ದೇಶ ಕಂಡ ಅಪ್ರತಿಮ ಮಹಾನ್ ಧೀಮಂತ ವ್ಯಕ್ತಿ, ಸಂವಿಧಾನವನ್ನು ರಚಿಸಿಕೊಟ್ಟ ಅದ್ಭುತ ಜ್ಞಾನಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಆಗಿದ್ದಾರೆ ಅವರ ಕೊಡುಗೆ ಅಪಾರವಾದದ್ದು. ನಾವೆಲ್ಲರೂ ಮುಂದಿನ ಪೀಳಿಗೆಗೆ ಅವರ ಜೀವನಾದರ್ಶ, ಮೌಲ್ಯಗಳು, ದೇಶಕ್ಕಾಗಿ ನೀಡಿದ ಸಂವಿಧಾನದ ಆಶಯವನ್ನು ತಿಳಿಸುವ ಜತೆಗೆ ರೂಡಿಸಿಕೊಳ್ಳುವಂತೆ ಮಾಡಬೇಕು ಎಂದರು. ವಿದೇಶಗಳಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ-ಸಿದ್ದಾಂತ, ಜೀವನಾದರ್ಶ ಕುರಿತು ಸಂಶೋಧನಾ ವಿಷಯಗಳಾಗಿ ಅಧ್ಯಯನ ಮಾಡಲಾಗುತ್ತಿದೆ. ಇದು ಭಾರತೀಯರು ಬಹಳಷ್ಟು ಹೆಮ್ಮೆ ಪಡುವಂತಹ ಸಂಗತಿ ಎಂದು ಹೇಳಿದರು. ಅಂಬೇಡ್ಕರ್ ಹಲವು ಪದವಿ ಪಡೆದಿದ್ದರು. ಅವರಂತೆ ಇಂದಿನ ಯುವ ಸಮೂಹವು ಶಿಕ್ಷಣಕ್ಕೆ ಆದ್ಯತೆಯನ್ನು ನೀಡುವುದರಿಂದ ದೇಶದಲ್ಲಿ ಇನ್ನೂ ಮಹತ್ತರವಾದ ಬದಲಾವಣೆಯನ್ನು ನೋಡಬಹುದು ಎಂದರು. ಉಪನ್ಯಾಸಕ ಶಿವಮೂರ್ತಿ ಅಂಬೇಡ್ಕರ್ ಕುರಿತು ಉಪನ್ಯಾಸ ನೀಡಿದರು. ಮುಖಂಡರಾದ ರವಿಕಲಾ, ಮ್ಯಾಥ್ಯು ಮುನಿಯಪ್ಪ ಮಾತನಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net