

ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ರಾಚನಮಡು ಗ್ರಾಮದ ವೆಂಕಟಪ್ಪ (72) ಎಂಬುವವರು ಶನಿವಾರ ಸಂಜೆ ನಿಗೂಢವಾಗಿ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಕುಟುಂಬಸ್ಥರು ಹಾಗೂ ಪೊಲೀಸರು ಮನವಿ ಮಾಡಿದ್ದಾರೆ.
ಕುಟುಂಬದ ಜತೆ ವಾಸವಿದ್ದ ವೆಂಕಟಪ್ಪ ಅವರು ಜ್ವರದಿಂದ ಬಳಲುತ್ತಿದ್ದರು. ಬೆಳಗ್ಗೆ ಮೆಡಿಕಲ್ ಶಾಪ್ನಿಂದ ಔಷಧ ತಂದು ಸೇವಿಸಿ ವಿಶ್ರಾಂತಿ ಪಡೆದಿದ್ದರು. ಸಂಜೆ 5 ಗಂಟೆಗೆ ಮನೆಯಿಂದ ಹೋದವರು ವಾಪಾಸಾಗಿಲ್ಲ. ಈ ಸಂಬಂಧ ಕಗ್ಗಲೀಪುರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವೆಂಕಟಪ್ಪ ಅವರ ಸುಳಿವು ಸಿಕ್ಕಲ್ಲಿ ಕೂಡಲೇ 8073201972 ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.