ದೌರ್ಜನ್ಯ, ಹಿಂಸೆ, ನಿರ್ಲಕ್ಷ್ಯ ಅಥವಾ ಶೋಷಣೆ ಎದುರಿಸುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಮತ್ತು ರಕ್ಷಣೆ ಒದಗಿಸುವುದು. ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಘನತೆ ಮತ್ತು ಸಬಲೀಕರಣವನ್ನು ಉತ್ತೇಜಿಸುವುದಾಗಿದೆ ಎಂದು ಅಕ್ಕಪಡೆ ಬಗ್ಗೆ ಅರಿವು ಮೂಡಿಸಲಾಯಿತು. ಶಿಕ್ಷಣದ ಮೂಲಕ ಹಕ್ಕುಗಳು, ಕಾನೂನುಗಳು, ಸುರಕ್ಷತಾ ಕ್ರಮಗಳು ಮತ್ತು ಲಭ್ಯವಿರುವ ಬೆಂಬಲ ವ್ಯವಸ್ಥೆಗಳ ಬಗ್ಗೆ, ಜಾಗೃತಿ ಮೂಡಿಸುವುದು ಮತ್ತು ಸಮಾಜದಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆದು, ಕಾನೂನಿನ ರಕ್ಷಣೆಯೊಂದಿಗೆ ಭಯಮುಕ್ತ ವಾತಾವರಣ ಸೃಷ್ಟಿಸುವುದು ಅಕ್ಕ ಪಡೆಯ ಉದ್ದೇಶವಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.ಕಾರ್ಯಕ್ರಮದಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ, ಸಕ್ಷಮ ಅಂಗನವಾಡಿ ಹಾಗೂ ಅಕ್ಕಪಡೆ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.