ಮಾದಕ ವ್ಯಸನ ಸಾಮಾಜಿಕ ಪಿಡುಗು

Awareness Week
Awareness Week
Published on
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ನಶಾ ಮುಕ್ತ ಭಾರತ ಅಭಿಯಾನ ಎನ್ನುವುದು ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲ ನಡೆಸುತ್ತಿರುವ ಒಂದು ಪ್ರಮುಖ ರಾಷ್ಟ್ರೀಯ ಮಾದಕವಸ್ತು ವಿರೋಧಿ ಆಂದೋಲನವಾಗಿದೆ ಮಾದಕ ವ್ಯಸನ ಸಾಮಾಜಿಕ ಪಿಡುಗಾಗಿದ್ದು ಇದರ ನಿರ್ಮೂಲನೆ ಎಲ್ಲರ ಕರ್ತವ್ಯವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಗೀತಾ ತಿಳಿಸಿದರು.
ದೇವನಹಳ್ಳಿ ಪಟ್ಟಣದ ಬನಶಂಕರಿ ಐಟಿಐ ಕಾಲೇಜಿನ ಆವಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ .ಬನಶಂಕರಿ ಐಟಿಐ ಹಾಗೂ ಸ್ಪಂದನ ಯುವಜನ ಸೇವಾ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಕುರಿತ ಜಾಗೃತಿ ಸಪ್ತಾಹದಲ್ಲಿ ಮಾತನಾಡಿದರು. ಮಾದಕ ವಸ್ತುಗಳ ವ್ಯಸನದ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸಿ ಆರೋಗ್ಯಕರ ಸಮಾಜ ನಿರ್ಮಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಮಾದಕ ವ್ಯಸನ ಕೇವಲ ವೈಯಕ್ತಿಕ ಆರೋಗ್ಯ ಸಮಸ್ಯೆಯಾಗಿ ಉಳಿದಿಲ್ಲ ಬದಲಿಗೆ ಇದು ರಾಷ್ಟ್ರೀಯ ಮತ್ತು ಸಾಮಾಜಿಕ ಪಿಡುಗಾಗಿ ಮಾರ್ಪಟ್ಟಿದೆ ಎಂದು ತಿಳಿಸಿದರು.
ದೇಶದ ಪ್ರಗತಿಗೆ ಅಡ್ಡಿ:
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮಹಾದೇವಿ ಮಾತನಾಡಿ, ಯುವ ಸಮುದಾಯ ಮಾದಕ ದ್ರವ್ಯಗಳಿಗೆ ಬಲಿಯಾಗುತ್ತಿರುವುದು ದೇಶದ ಪ್ರಗತಿಗೆ ದೊಡ್ಡ ಅಡ್ಡಿಯಾಗಿದೆ ಎಂದರು. ಯುವ ಶಕ್ತಿಯೇ ದೇಶದ ನಿಜವಾದ ಸಂಪತ್ತಾಗಿದ್ದು ಯುವಕರು ಆರೋಗ್ಯವಾಗಿದ್ದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದರು. ನಶಾ ಮುಕ್ತ ಭಾರತ ಎಂಬುದು ಕೇವಲ ಸರ್ಕಾರದ ಘೋಷಣೆಯಲ್ಲ ಇದು ಪ್ರತಿ ಭಾರತೀಯನ ಕನಸಾಗಿರಬೇಕು ನಾವೆಲ್ಲರೂ ಒಗ್ಗೂಡಿ ಮಾದಕ ವ್ಯಸನದ ವಿರುದ್ಧ ಹೋರಾಡುವ ಮೂಲಕ ಸದೃಢ ಮತ್ತು ಭವ್ಯ ಭಾರತ ನಿರ್ಮಿಸೋಣ ಎಂದು ತಿಳಿಸಿದರು. ಈ ಕಾರ್ಯಕ್ರಮದ ಅಂಗವಾಗಿ ಶ್ರೀಬನಶಂಕರಿ ಐಟಿಐ ಕಾಲೇಜು ಪ್ರಾಂಶುಪಾಲ ಡಿ.ವೆಂಕಟೇಶ್ ವ್ಯಸನ ಮುಕ್ತ ಭಾರತ ಪ್ರತಿಜ್ಞಾ ವಿಧಿ ಬೋಧಿಸಿದರು ಹಾಗೂ ಆಪ್ತ ಸಲಹಾ ಸಮಾಲೋಚಕಿ ರೇಖಾ ಹೆಚ್‌ಐವಿ ಬಗ್ಗೆ ಜಾಗೃತಿ ಮೂಡಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net