ಪ್ರತಿ ಸಂಘಕ್ಕೆ 10ಲಕ್ಷ ರೂಪಾಯಿಯಷ್ಟು ಅನುದಾನವನ್ನು ಸರ್ಕಾರ ನೀಡಲಿದೆ. ಇದರ ಮೂಲಕ ಚಟುವಟಿಕೆಗಳನ್ನು ಮಾಡಲೇಬೇಕು. ಕ್ರೀಡೆ ಮತ್ತು ಫಿಟ್ನೆಸ್ಗೆ ಸಂಬಂಧಿಸಿದಂತೆ ಗ್ರಾಮೀಣ ಕ್ರೀಡಾಕೂಟಗಳು, ಯೋಗ ಶಿಬಿರಗಳು, ಸಾಂಪ್ರದಾಯಿಕ ಆಟಗಳ ಆಯೋಜನೆ ಮಾಡುವುದು, ಸಮುದಾಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೆರೆ, ಕಲ್ಯಾಣಿಗಳ ಸ್ವಚ್ಛತೆ, ಸ್ವಚ್ಛತಾ ಅಭಿಯಾನಗಳನ್ನು ನಡೆಸುವುದು ಪ್ರಮುಖವಾಗಿರಲಿವೆ ಇದರ ಜತೆಗೆ ಸಸಿ ನೆಡುವುದು, ಹವಾಮಾನ ಬದಲಾವಣೆ ಜಾಗೃತಿ ರಕ್ತದಾನ ಶಿಬಿರಗಳು, ಮಾನಸಿಕ ಆರೋಗ್ಯ ಜಾಗೃತಿ ಶಿಬಿರಗಳು, ಸಾಂಸ್ಕತಿಕ ಕಾರ್ಯಕ್ರಮಗಳು, ಭಾವೈಕ್ಯತೆ ಮೂಡಿಸುವ ಚಟುವಟಿಕೆಗಳನ್ನು ನಡೆಸಬೇಕು. ಜಲ ಸಂರಕ್ಷಣೆ, ತ್ಯಾಜ್ಯ ನಿರ್ವಹಣೆ, ಸೈಬರ್ ಸುರಕ್ಷತೆ ಜಾಗೃತಿ, ಸಂಚಾರ ನಿಯಮಗಳ ಜಾಗೃತಿ ಮತ್ತಿತರ ಸಾಮಾಜಿಕ ಚಟುವಟಿಕೆಗಳು ಇದರಡಿ ನಡೆಯಲಿವೆ