2028ಕ್ಕೆ ಬಿಜೆಪಿಗೆ 150ಕ್ಕೂ ಹೆಚ್ಚು ಸ್ಥಾನ

bla workshop
bla workshop
Published on
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ರಾಜ್ಯದಲ್ಲಿ 2028 ನೇ ಸಾಲಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೊಸಕೋಟೆ ತಾಲೂಕು ಬಿಜೆಪಿ ಅಧ್ಯಕ್ಷ ಕೆ.ಸತೀಶ್ ವಿಶ್ವಾಸ ವ್ಯಕ್ತಪಡಿಸಿದರು.
ಹೊಸಕೋಟೆ ನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬಿಎಲ್‌ಎ 2 ಕಾರ್ಯಾಗಾರದಲ್ಲಿ ಮಾತನಾಡಿದರು. ಹೊಸದಾಗಿ ಸೇರ್ಪಡೆಯಾಗುವ ಮತದಾರರು ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಬೇಕು. ಅದಕ್ಕೆ ಪೂರಕ ದಾಖಲಾತಿಗಳನ್ನು ನೀಡಬೇಕು. ತಮ್ಮ ಊರುಗಳಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಮತದಾರರ ಪಟ್ಟಿ ಪರಿಷ್ಕರಣೆ ನಡೆಯುವ ಸಂದರ್ಭದಲ್ಲಿ ಪ್ರತಿಯೊಬ್ಬರು ಅಗತ್ಯವಾದ ದಾಖಲಾತಿ ಒದಗಿಸಿ ಮತದಾರರ ಪಟ್ಟಿಯಲ್ಲಿ ಹೆಸರ‌್ನು ಸೇರಿಸಬೇಕೆಂದು ಸಲಹೆ ನೀಡಿದರು. ನಕಲಿ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿದ್ದರೆ ಅಂತಹವರ ಹೆಸರನ್ನು ತೆಗೆಯುವ ಕೆಲಸ ಆಗಬೇಕು ಎಂದ ಸತೀಶ್, ಅಕ್ರಮ ಮತದಾನವನ್ನು ತಡೆಯಲು ಕೇಂದ್ರ ಸರ್ಕಾರ ಕ್ರಮ ವಹಿಸುತ್ತಿದೆ. ಬಿಎಲ್ಎ2 ಪರಿಷ್ಕರಣ ಕಾರ್ಯದಲ್ಲಿ ಬಿಜೆಪಿ ಕಾರ್ಯಕರ್ತರು ತೊಡಗಿಸಕೊಳ್ಳಬೇಕು ಎಂದು ಮನವಿ ಮಾಡಿದರು.
ಸಕ್ರಿಯವಾಗಿ ತೊಡಗಿಸಿಕೊಳ್ಳಿ:
ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ ದೇಶದಲ್ಲಿ ಸಮಗ್ರ ಮತದಾರರ ಪರಿಷ್ಕರಣ ಕೆಲಸ ನಡೆಯುತ್ತಿದೆ. ಇದರಲ್ಲಿ ಬಿಜೆಪಿ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಪಡೆಯುವಲ್ಲಿ ಕಾರ್ಯಕರ್ತರು ಸನ್ನದ್ಧವಾಗಿ ಶ್ರಮಿಸಬೇಕು ಎಂದು ಹೇಳಿದರು. ತಾಲೂಕಿನ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರು ಎಚ್ಚರವಹಿಸಿ ಮತದಾರರ ಪರಿಷ್ಕರಣಾ ಪಟ್ಟಿಯಲ್ಲಿ ನೈಜ ಮತದಾರರನ್ನು ಉಳಿಸಿ ನಕಲಿ ಮತದಾರರನ್ನು ಹೊರಗಡೆ ಕಳಿಸುವ ಕೆಲಸ ಮಾಡಬೇಕು, ಪ್ರತಿಯೊಬ್ಬರೂ ಜಾಗ್ರತೆಯಿಂದ ಜವಾಬ್ದಾರಿಗಳನ್ನು ನಿರ್ವಹಿಸಬೇಕೆಂದು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net