ಹೌದು. ಗ್ರಾಮಾಂತರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಜಮೀನುಗಳಲ್ಲಿ ಕೊಳವೆಬಾವಿಗಳಿಗೆ ಅಳವಡಿಸಿರುವ ಕೇಬಲ್‌ಗಳನ್ನು ಕಳವು ಮಾಡುತ್ತಿರುವ ಪ್ರಕರಣಗಳು ಹೆಚ್ಚಿವೆ. ಇದರಿಂದ ರೈತರು ಕಂಗಾಲಾಗಿದ್ದು, ಆರ್ಥಿಕ ನಷ್ಟದ ಜತೆಗೆ ಬೆಳೆಗಳಿಗೆ ಸರಿಯಾದ ವೇಳೆ ನೀರು ಹಾಯಿಸಲು ಸಾಧ್ಯವಾಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಸ್ಥಳೀಯ ಕಿಡಿಗೇಡಿಗಳು ಇಂಥ ಕೃತ್ಯ ನಡೆಸುತ್ತಿದ್ದರು. ಎಷ್ಟೇ ಪ್ರಕರಣಗಳಲ್ಲಿ ಜಮೀನುಗಳ ಮಾಲೀಕರ ಕೈಗೆ ಸಿಕ್ಕಿ ಬಿದ್ದು ಧರ್ಮದೇಟು ತಿನ್ನುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಕೇಬಲ್ ಕಳ್ಳರ ತಂಡವೇ ರಚನೆಯಾಗಿದ್ದು, ಹೊರ ಜಿಲ್ಲೆಗಳಿಂದ ಬಂದು ರಾತ್ರಿ ವೇಳೆ ಕೃತ್ಯ ಎಸಗುತ್ತಿದ್ದಾರೆ ಎಂಬುದು ಸ್ಥಳೀಯರ ದೂರಾಗಿದೆ.