ಡಿಜಿಟಲ್ ರೂಪದಲ್ಲಿ ಜನಗಣತಿ

Census in digital
Census in digital
Published on
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಜನಗಣತಿ-2027 ಭಾರತದ 16ನೇ ಜನಗಣತಿ ಮತ್ತು ಸ್ವಾತಂತ್ರ್ಯದ ನಂತರದ 8ನೇ ಜನಗಣತಿ ಇದಾಗಿದ್ದು, ಈ ಬಾರಿಯ ಜನಗಣತಿಯು ಎರಡು ಹಂತದಲ್ಲಿ ನಡೆಯಲಿದೆ. ಏ. 1 ರಿಂದ ಸೆ. 30, 2026 ರವರೆಗೆ ನಡೆಯಲಿರುವ ಮೊದಲ ಹಂತದ ಮನೆಗಳ ಪಟ್ಟಿ ಮತ್ತು ವಸತಿ ಗಣತಿಯನ್ನು ಒಳಗೊಂಡಿದೆ. ಎರಡನೇ ಹಂತದ ಜನಸಂಖ್ಯಾ ಗಣತಿಯು 2007ರ ಫೆ.9, ೆ. 28ರವೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
2011 ರಲ್ಲಿ ನಡೆದಿತ್ತು:
ಈ ಹಿಂದೆ 2011ರಲ್ಲಿ ಕೊನೆಯ ಬಾರಿಗೆ ಜನಗಣತಿ ನಡೆದಿತ್ತು. ಬಳಿಕ 2021ರಲ್ಲಿ ಜನಗಣತಿ ನಡೆಯಬೇಕಾಗಿತ್ತು. ಆದರೆ, ಕೋವಿಡ್ ಕಾರಣಕ್ಕೆ 10 ವರ್ಷಗಳಿಗೆ ಒಮ್ಮೆ ನಡೆಯಬೇಕಾದ ಜನಗಣತಿ ನಡೆದಿರಲಿಲ್ಲ. ಇದೀಗ 2026-27ನೇ ಸಾಲಿನಲ್ಲಿ ಜನಗಣತಿ ನಡೆಯುತ್ತಿದೆ.
ಮಾನಿಟರಿಂಗ್ ಸಿಸ್ಟಂ ಪೋರ್ಟಲ್:
ಮೊದಲ ಹಂತದಲ್ಲಿ ಏ.1 ರಿಂದ 15 ವರೆಗೆ ಸಾರ್ವಜನಿಕರು ಜನಗಣತಿ ಆ್ಯಪ್ ಅಥವಾ ಪೋರ್ಟಲ್ ಮೂಲಕ ಸ್ವಯಂ ಮಾಹಿತಿ ದಾಖಲಿಸಿಕೊಳ್ಳಬಹುದು. ನಂತರ ಏ.16 ರಿಂದ ಮೇ 16 ರವರೆಗೆ ಗಣತಿದಾರರು ಮನೆಪಟ್ಟಿ, ಮನೆ ಗಣತಿ ಕ್ಷೇತ್ರ ಕಾರ್ಯ ಮಾಡಲಿದ್ದಾರೆ. ಗಣತಿದಾರರ ಸ್ಮಾರ್ಟ್ ಫೋನ್ ಮೀಸಲಾದ ಮೊಬೈಲ್ ಆ್ಯಪ್ ಮೂಲಕ ಆನ್‌ಲೈನ್‌ನಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಆಫ್‌ಲೈನ್‌ನಲ್ಲಿಯೂ ಈ ಆ್ಯಪ್ ಕೆಲಸ ಮಾಡಲಿದ್ದು, ನೆಟ್‌ವರ್ಕ್ ವ್ಯಾಪ್ತಿಗೆ ಬಂದಾಗ ಸಂಗ್ರಹಿಸಿದ ಮಾಹಿತಿಗಳು ಸರ್ವರ್‌ಗೆ ಸಂಯೋಜನೆ ಆಗಲಿವೆ. ಗಣತಿ ಪ್ರಕ್ರಿಯೆಯನ್ನು ಆರಂಭದಿಂದ ಮುಕ್ತಾಯದವರೆಗೆ ನಿರ್ವಹಿಸಲು ’ಜನಗಣತಿ ನಿರ್ವಹಣೆ ಮತ್ತು ಮಾನಿಟರಿಂಗ್ ಸಿಸ್ಟಂ’ (ಸಿಎಂಎಂಎಸ್) ಎಂಬ ವಿಶೇಷ ವೆಬ್ ಪೋರ್ಟಲ್ ಅಭಿವೃದ್ಧಿಪಡಿಸಲಾಗಿದೆ.
ಜನಗಣತಿಗೆ ಬ್ಲಾಕ್ ರಚನೆ:
ಜನಗಣತಿ ಸಲುವಾಗಿ ಬ್ಲಾಕ್ ರಚಿಸಲಾಗಿದ್ದು,150 ರಿಂದ 200 ಮನೆಗಳು ಅಥವಾ 700 ರಿಂದ 800 ಜನಸಂಖ್ಯೆಗೆ ಓರ್ವ ಗಣತಿದಾರರನ್ನು ಮತ್ತು ಪ್ರತಿ ಆರು ಜನ ಗಣತಿದಾರರಿಗೆ ಓರ್ವ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಜಿಲ್ಲೆಯ ಜಿಲ್ಲಾಧಿಕಾರಿಗಳು ಪ್ರಧಾನ ಜನಗಣತಿ ಅಧಿಕಾರಿಗಳಾಗಿದ್ದು, ಜಿಲ್ಲಾ ಜನಗಣತಿ ಅಧಿಕಾರಿಗಳಾಗಿ ಅಪರ ಜಿಲ್ಲಾಧಿಕಾರಿಗಳು, ಹೆಚ್ಚುವರಿ ಜಿಲ್ಲಾ ಜನಗಣತಿ ಅಧಿಕಾರಿಗಳಾಗಿ ಜಿಪಂ ಮುಖ್ಯ ಯೋಜನಾಧಿಕಾರಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಉಪ ವಿಭಾಗಾಧಿಕಾರಿಗಳು ಉಪ ವಿಭಾಗ ಹಂತದ ಚಾರ್ಜ್ ಅಧಿಕಾರಿಗಳಾಗಿ, ಗ್ರಾಮೀಣ ಪ್ರದೇಶದ ಚಾರ್ಜ್ ಅಧಿಕಾರಿಗಳಾಗಿ ತಹಸೀಲ್ದಾರರು, ನಗರ ಪ್ರದೇಶಕ್ಕೆ ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಚಾರ್ಜ್ ಅಧಿಕಾರಿಗಳಾಗಿರುತ್ತಾರೆ.
ಮೊದಲ ಹಂತದಲ್ಲಿ ಮನೆ ಗಣತಿ:
ಮೊದಲ ಹಂತದಲ್ಲಿ ಮನೆ ಗಣತಿ ‘ಮೊದಲ ಹಂತದಲ್ಲಿ ಮನೆ ಗಣತಿ ಮಾತ್ರ ನಡೆಯಲಿದ್ದು, ಕ್ಷೇತ್ರ ಮಟ್ಟದ ಗಣತಿದಾರರು ಎಚ್‌ಎಲ್‌ಬಿ (ಹೌಸ್ ಲಿಸ್ಟಿಂಗ್ ಬ್ಲಾಕ್) ಕ್ರಿಯೇಟರ್ ಆ್ಯಪ್ ಬಳಸಿ ಪ್ರತಿ ಬ್ಲಾಕ್‌ನ ಮನೆಗಳ ಲೊಕೇಶನ್‌ಮತ್ತು ವ್ಯಾಪ್ತಿಯನ್ನು ಜಿಯೋ ಟ್ಯಾಗಿಂಗ್ ಮೂಲಕ ಗುರುತಿಸಲಿದ್ದಾರೆ. ಜನಗಣತಿಯ ಮೊದಲ ಹಂತದಲ್ಲ್ಲಿಮನೆಗಳ ಪಟ್ಟಿ ಮತ್ತು ವಸತಿ ಗಣತಿ ಕೈಗೊಳ್ಳಲಾಗುತ್ತದೆ. ಈ ವೇಳೆ ಮನೆಗಳ ಸಂಖ್ಯೆ, ಗೋಡೆ, ಛಾವಣಿ ನಿರ್ಮಾಣಕ್ಕೆ ಬಳಸಿದ ವಸ್ತುಗಳು, ಕುಡಿಯುವ ನೀರು, ಶೌಚಗೃಹ, ವಿದ್ಯುತ್ ಮತ್ತು ಮನೆಯಲ್ಲಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ. ಎರಡನೇ ಹಂತ ಜನಸಂಖ್ಯಾ ಗಣತಿ ಎರಡನೇ ಹಂತದಲ್ಲಿ ಇದ್ದು ಪ್ರತಿ ವ್ಯಕ್ತಿಯ ವಯಸ್ಸು, ಲಿಂಗ, ಶಿಕ್ಷಣ, ಉದ್ಯೋಗ, ಧರ್ಮ ಮತ್ತು ಭಾಷೆಯಂತಹ ವೈಯಕ್ತಿಕ ವಿವರಗಳನ್ನು ಸಂಗ್ರಹಿಸಲಾಗುತ್ತದೆ.
ಜನಗಣತಿ-2027 ಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ಇಂದಿನಿಂದ ಮೂರು ದಿನಗಳ ಕಾಲ ಚಾರ್ಜ್ ಆಫೀಸರ್ ಗಳಿಗೆ ತರಬೇತಿ ನೀಡಲಾಗುವುದು. ಗಣತಿದಾರರಿಗೂ ತರಬೇತಿ ನೀಡಲಾಗುತ್ತಿದೆ. ಸಾರ್ವಜನಿಕರು ಜನಗಣತಿಗೆ ನಿಖರವಾದ ಮಾಹಿತಿ ನೀಡಿ ಸಹಕರಿಸಬೇಕು.
ಡಾ.ಕೆ.ಎನ್.ಅನುರಾಧಾ, ಜಿಲ್ಲಾಧಿಕಾರಿ ಬೆಂ.ಗ್ರಾಮಾಂತರ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net