ಹಸಿ ಕಸ, ಬಣ ಕಸ ಹಾಗೂ ವೈದ್ಯಕೀಯ ತ್ಯಾಜ್ಯಗಳ ಕಸವನ್ನು ಮೂಲದಲ್ಲೇ ವಿಂಗಡಿಸುವ ಕಾರ್ಯವಾಗಬೇಕು ಈ ಮೂಲಕ ಕಸ ಮಿಶ್ರಣಗೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದು ಸಿಇಒ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉತ್ಪನ್ನಗಳನ್ನು ನಿಷೇಧಿಸಿದೆ, ಇವುಗಳ ಉತ್ಪಾದನೆ, ವಿತರಣೆ ಹಾಗೂ ಬಳಕೆ ಕಂಡುಬಂದರೆ ದಂಡದ ಜತೆಗೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಕಸದ ಸಮಸ್ಯೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಜಿಲ್ಲಾ ಪಂಚಾಯಿತಿಯಿಂದ ಎಲ್ಲ ಬಗೆಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಮನವಿ ಮಾಡಿದರು.