ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 2ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ, ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಸಭೆಯಲ್ಲಿ ಮಾತನಾಡಿದರು. ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ, ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜತೆಗೆ ನೊಂದವರಿಗೆ ವಿಳಂಬವಿಲ್ಲದೆ ಪರಿಹಾರಧನ ಮಂಜೂರಾತಿಗೆ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು. ಗ್ರಾಮೀಣ ಪ್ರದೇಶಗಳ ಜನರಲ್ಲಿ ಪೊಲೀಸಸರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಾನೂನಿನ ಅರಿವು ಮೂಡಿಸುವ ಮೂಲಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡುವಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದರು.