ದೇವಾಲಯಗಳಲ್ಲಿ ಹುಂಡಿ ಎಣಿಕೆ ಅಥವಾ ಲೆಕ್ಕಪತ್ರ ನಿರ್ವಹಣೆ ಸಂದರ್ಭದಲ್ಲಿ ಕಳ್ಳತನ ಮತ್ತು ಚಿನ್ನಾಭರಣ, ನಗದು ಇತ್ಯಾದಿಗಳ ದುರುಪಯೋಗವಾಗುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು ಅಗತ್ಯ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ದೇವಾಲಯದಲ್ಲಿ ಅಳವಡಿಸುವ ಹುಂಡಿಗಳಿಗಳು ನಾಲ್ಕು ದಿಕ್ಕಿನಿಂದ ಕಾಣುವಂತೆ ಅಗತ್ಯವಾದ ಸಿಸಿ ಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಿ ಧಾರ್ಮಿಕ ದತ್ತಿ ಇಲಾಖೆ ಮೇಲ್ವಿಚಾರಣೆ ನಡೆಸುವುದು.ಜತೆಗೆ ವೆಬ್ ಕ್ಯಾಮರಾ ಭದ್ರತೆ ದೃಷ್ಟಿಯಿಂದ ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕರು, ಪೊಲೀಸ್ ಠಾಣೆಗಳಿಗೆ ದೇವಾಲಯಗಳ ವೆಬ್ ಕ್ಯಾಮರಾ ಸಂಪರ್ಕ ಕಲ್ಪಿಸಿ ವೀಕ್ಷಣೆ ಮಾಡುವುದು ಇದರಲ್ಲಿ ಸೇರಿದೆ ಎಂದು ಮಾಹಿತಿ ನೀಡಿದರು. ನಗದು ಕಳ್ಳತನ ತಪ್ಪಿಸಲು ಡಿಜಿಟಲ್ ಪಾವತಿಗೆ ಹೆಚ್ಚಿನ ಉತ್ತೇಜನ ನೀಡಲು ಕ್ಯೂ ಆರ್‌ಕೋಡ್ ಅಳವಡಿಸಿ ಜತೆಗೆ ಅದರ ಅಡಿಯಲ್ಲಿ ಸಂಬಂಧಪಟ್ಟ ಬ್ಯಾಂಕ್ ವಿವರಗಳನ್ನು ಅಳವಡಿಸಬೇಕು ಎಂದು ಹೇಳಿದರು.