ದೇವನಹಳ್ಳಿ ತಾಲೂಕು ಜಿಲ್ಲಾಡಳಿತಭವನದಲ್ಲಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ (ದಿಶಾ) ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಪರಿಶೀಲನೆ ನಡೆಸಿ ಮಾತನಾಡಿದರು. ಕೇಂದ್ರ ಸರ್ಕಾರ ಸಾಕಷ್ಟು ಜನರ ಪರ ಯೋಜನೆಗಳನ್ನು ತಂದಿದ್ದು, ಅದರ ಸೌಲಭ್ಯಗಳು ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಕೇವಲ ಕಚೇರಿಗೆ ಸೀಮಿತವಾಗದೆ. ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ, ಅಲ್ಲಿ ಸಮಸ್ಯೆಗಳನ್ನು ಆಲಿಸಬೇಕು. ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಶಿಷ್ಟಾಚಾರ ಪಾಲಿಸುವ ಕೆಲಸ ಮಾಡಬೇಕು ಎಂದರು. ಸಮರ್ಪಕವಾಗಿ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುತ್ತದೆ, ಸಾರ್ವಜನಿಕರ ಆರೋಪವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಈ ಬಗ್ಗೆ ಪರಿಶೀಲನೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.