1962-63ನೇ ಸಾಲಿನಲ್ಲಿ ದೇವನಹಳ್ಳಿ ತಾಲೂಕು ತಹಸೀಲ್ದಾರ್ ಆದೇಶದಂತೆ ಖಾಸಗಿ ವ್ಯಕ್ತಿಗಳಿಗೆ ಸಾಗುವಳಿ ಚೀಟಿ ನೀಡಿದಂತೆ ದಾಖಲೆಗಳನ್ನು ಸೃಷ್ಟಿ ಮಾಡಲಾಗಿದೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮುನಿಯಮ್ಮ (1 ಎಕರೆ), ಮುನಿಯಪ್ಪ (2 ಎಕರೆ), ಕೈಯಮ್ಮ (2 ಎಕರೆ) ಸೇರಿ 6 ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ಸಾಗುವಳಿ ಚೀಟಿ, ಮಂಜೂರಾತಿ ನಕ್ಷೆ ಮತ್ತು ವಿತರಣಾ ವಹಿ ತಯಾರಿಸಲಾಗಿದೆ. ತನಿಖಾಧಿಕಾರಿಗಳ ಪ್ರಕಾರ ಈ ಪ್ರಕರಣದಲ್ಲಿ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ತಿಳಿದು ಬಂದಿದೆ.