ಡಿ.25ರಂದು ಬ್ರಹ್ಮರಥೋತ್ಸವದ ಹಿನ್ನೆಲೆಯಲ್ಲಿ ವಿಶೇಷವಾಗಿ ಪುಷ್ಪಾಲಂಕಾರ, ದೀಪಾಲಂಕಾರದ ಜತೆಗೆ ಶುದ್ಧ ಕುಡಿವ ನೀರಿವ ವ್ಯವಸ್ಥೆ, ಕ್ಯೂಲೈನ್ ವ್ಯವಸ್ಥೆ ಹಾಗೂ ತಾತ್ಕಾಲಿಕ ಶೌಚಗೃಹ ನಿರ್ಮಾಣದ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಘಾಟಿ ಜಾತ್ರೆಯಲ್ಲಿ ಜಾನುವಾರುಗಳಿಗೆ ಹಾಗೂ ಭಕ್ತರ ವಾಹನಗಳಿಗೆ ಸುಂಕ ಇರುವುದಿಲ್ಲ. ಹಿರಿಯ ನಾಗರಿಕರಿಗೆ, ವಿಕಲಚೇತನರಿಗೆ, ಗರ್ಭಿಣಿ ಬಾಣಂತಿಯರಿಗೆ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಡಿ.10 ರಿಂದ 18 ರವರೆಗೆ ರಾಸುಗಳ ಜಾತ್ರೆ ನಡೆಯದ್ದು, ವಿಶೇಷ ದೀಪಾಲಂಕಾರ, ರೈತರಿಗೆ ಮತ್ತು ರಾಸುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ರಾಸುಗಳಿಗೆ ರೋಗಗಳು ಹರಡದಂತೆ ಪಶು ವೈದ್ಯರ ವ್ಯವಸ್ಥೆ, ರಾಸುಗಳ ಜಾತ್ರೆಗೆ ಆಗಮಿಸುವ ರೈತರಿಗೆ ದೇಗುಲದ ವತಿಯಿಂದ ತಿಂಡಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಚಿವರು ತಿಳಿಸಿದರು.