ಕೆಐಎಎಲ್‌ನಲ್ಲಿ 44 ಕೋಟಿ ರೂ.ವಸ್ತುಗಳ ಜಪ್ತಿ

Goods worth Rs 44 crore seized at KIAL
Goods worth Rs 44 crore seized at KIAL
Published on
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲವು ದಿನಗಳಿಂದ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಮಾದಕ ವಸ್ತು ಹಾಗೂ ಚಿನ್ನ ಕಳುವಿನ ಪ್ರತ್ಯೇಕ ಪ್ರಕರಣಗಳಲ್ಲಿ ಅಂದಾಜು 44 ಕೋಟಿ ರೂ.ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಜೂ.17ರಂದು ಬ್ಯಾಂಕಾಕ್‌ನಿಂದ ಆಗಮಿಸಿದ್ದ ಇಬ್ಬರು ಪ್ರಯಾಣಿಕರನ್ನು ತಪಾಸಣೆಗೊಳಪಡಿಸಿದಾಗ ಬ್ಯಾಗೇಜ್‌ನಲ್ಲಿದ್ದ 2.02 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಇದರ ಮೌಲ್ಯ ಸುಮಾರು 70 ಲಕ್ಷ ರೂ ಎಂದು ಅಂದಾಜಿಸಲಾಗಿದೆ. 19ರಂದು ಬ್ಯಾಂಕಾಕ್‌ನಿಂದ ಬಂದ ಮತ್ತೊಬ್ಬ ಪ್ರಯಾಣಿಕನ ಬ್ಯಾಗೇಜ್‌ನಲ್ಲಿ 5.98 ಗಾಂಜಾ ಪತ್ತೆಯಾಗಿದೆ. 20 ರಂದು ದುಬೈನಿಂದ ಅಗಮಿಸಿದ ಪ್ರಯಾಣಿಕನ ಬಳಿ 575 ಗ್ರಾಂ ಚಿನ್ನ ಹಾಗೂ ಸಿಗರೇಟ್ ಕಡ್ಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. 21 ರಂದು ಕೌಲಾಲಂಪುರದಿಂದ ಬಂದ ಪ್ರಯಾಣಿಕ ಜೇಬಿನಲ್ಲಿದ್ದ 427 ಗ್ರಾಂ ಚಿನ್ನಾಭರಣ ಪತ್ತೆ ಹಚ್ಚಲಾಗಿದೆ. ಇವುಗಳ ಮೌಲ್ಯ 44 ಕೋಟಿ ರೂ.ಎಂದು ಅಂದಾಜಿಸಲಾಗಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net