ಜಿಲ್ಲಾಧಿಕಾರಿ ಡಾ. ಕೆ.ಎನ್.ಅನುರಾಧಾ ದೇವರ ದಾಸಿಮಯ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ವೃತ್ತಿಯಲ್ಲಿ ನೇಯ್ಗೆಕಾರರಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ಶಿವನ ಅಪಾರ ಭಕ್ತರಾಗಿದ್ದು, ರಾಮನಾಥ ಇವರ ಅಂಕಿತನಾಮ. ಶಿವ ಜಗತ್ತನ್ನೇ ವ್ಯಾಪಿಸಿಕೊಂಡಂತೆ, ಜಗತ್ತೇ ಶಿವನ ರೂಪ ಎಂಬ ನಿಲುವಿನೊಂದಿಗೆ, ಇಳೆ ನಿಮ್ಮ ದಾನ, ಬೆಳೆ ನಿಮ್ಮ ದಾನ, ಸುಳಿದು ಸೂಸುವ ಗಾಳಿ ನಿಮ್ಮ ದಾನವಯ್ಯ ಎಂದೆನ್ನುವ ದಾಸಿಮಯ್ಯನಲ್ಲಿ ಈ ಲೋಕವನ್ನು ನೋಡುವ ಕ್ರಮ ಹೊಸತನದಿಂದ ಕೂಡಿದೆ. ಅವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಡಿಸಿ ಸ್ಮರಿಸಿದರು.