ಡಿ.13 ಕ್ಕೆ ರಾಷ್ಟ್ರೀಯ ಲೋಕ ಅದಾಲತ್

ಡಿ.13 ಕ್ಕೆ ರಾಷ್ಟ್ರೀಯ ಲೋಕ ಅದಾಲತ್
ಡಿ.13 ಕ್ಕೆ ರಾಷ್ಟ್ರೀಯ ಲೋಕ ಅದಾಲತ್
Published on
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ಡಿ.13 ರಂದು ಎಲ್ಲಡೆ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ ಮತ್ತು ಬೆಂಗಳೂರು ಪೂರ್ವ ತಾಲೂಕು ಕೃಷ್ಣರಾಜಪುರ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ಇದರಲ್ಲಿ ಸಾರ್ವಜನಿಕರು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಧಾನ ಜಿಲ್ಲಾ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ಎಸ್. ರೇಖಾ ತಿಳಿಸಿದ್ದಾರೆ.
ಆನ್‌ಲೈನ್‌ನಲ್ಲೂ ಭೇಟಿಗೆ ಅವಕಾಶ:
ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಗೆ ಭರಿಸಬೇಕಾಗಿರುವ ನೀರಿನ ಕರ, ಆಸ್ತಿ ಕರ, ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದ ಹಣ ವಸೂಲಾತಿ ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳು ಎಂದು ದಾಖಲಿಸಿ, ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಅಸಲು ದಾವೆಗಳು, ಬ್ಯಾಂಕ್‌ಗಳಿಗೆ ಸಂಬಂಧಿಸಿದ ಪ್ರಕರಣಗಳು, ಭೂಸ್ವಾಧೀನ ಪರಿಹಾರದ ಪ್ರಕರಣಗಳು, ವೈವಾಹಿಕ ಹಾಗೂ ಜೀವಾನಾಂಶ ಪ್ರಕರಣಗಳು, ಕಾನೂನಿನ ಅನ್ವಯ ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳು ಆನೇಕಲ್, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ಹಾಗೂ ದೇವನಹಳ್ಳಿಗೆ ಆನ್‌ಲೈನ್, ಇ-ಮೇಲ್, ಎಸ್‌ಎಂಎಸ್,ವಾಟ್ಸಾಪ್ ಅಥವಾ ಖುದ್ದಾಗಿ ಹಾಜರಾಗುವ ಮೂಲಕ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.
ಸದುಪಯೋಗಪಡಿಸಿಕೊಳ್ಳಬೇಕು:
ಜತೆಗೆ ನ್ಯಾಯಾಲಯಗಳಲ್ಲಿ, ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಡಿ.13ರಂದು ಆಯಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕಅದಾಲತ್ ಏರ್ಪಡಿಸಲಾಗಿದ್ದು, ಕಕ್ಷಿದಾರರು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಬಿ.ಎಸ್. ರೇಖಾ ತಿಳಿಸಿದ್ದಾರೆ.
ಮತ್ತು ಖಾಯಂ ಜನತಾ ನ್ಯಾಯಾಲಯಗಳನ್ನು ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಮತ್ತು ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್ ಮೂಲಕ ರಾಜಿ ಮಾಡಿಕೊಂಡರೆ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗುವುದು ಹಾಗೂ ಅದಾಲತ್‌ನಲ್ಲಿ ಪ್ರಕರಣ ಇತ್ಯರ್ಥಗೊಂಡರೆ ಮೇಲ್ಮನವಿಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.
--
ಪೊಟೋ ರೇಖಾ ಎಂದು ಸೇವ್ ಆಗಿದೆ()
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net