ಬಿಪಿಎಲ್ ಕಾರ್ಡ್‌ಗಳ ಏಕಾಏಕಿ ರದ್ದತಿಗೆ ಅಸಮಾಧಾನ ವ್ಯಕ್ತಪಡಿಸಿದ ಗ್ಯಾರಂಟಿ ಯೋಜನೆ ಸದಸ್ಯರು ಬಡವರು, ಮಧ್ಯಮ ವರ್ಗದವರು ಮಕ್ಕಳ ಶೈಕ್ಷಣಿಕ ಬಿಲ್ ಪಾವತಿ ಉದ್ದೇಶಕ್ಕಾಗಿ, ಅಂಗವಿಕಲರ ಪಿಂಚಣಿ ಸೇರಿ ಇತರೆ ಸರ್ಕಾರಿ ಕೆಲಸಗಳಿಗೆ ರೇಷನ್‌ಕಾರ್ಡ್ ಉಪಯೋಗಿಸಲಾಗುತ್ತಿತ್ತು. ಆದರೆ ಏಕಾಏಕಿ ಬಿಪಿಎಲ್ ಕಾರ್ಡ್ ರದ್ದತಿಯಿಂದ ಹಲವರಿಗೆ ಅನಾನುಕೂಲವಾಗಿದೆ ಎಂದು ಹೇಳಿದರು. ವಜಾ ಆಗಿರುವ ಬಿಪಿಎಲ್ ಕಾರ್ಡ್ ಗಳನ್ನು ಖುದ್ದಾಗಿ ಭೇಟಿ ನೀಡಿ ಮರು ಪರಿಶೀಲಿಸಿ ಮತ್ತೆ ಅವರಿಗೆ ಕಾಡ್ ನೀಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಆಹಾರ ಇಲಾಖೆ ಅಧಿಕಾರಿ ಪ್ರತಿಕ್ರಿಯಿಸಿ ಜಿಲ್ಲೆಯಲ್ಲಿ ಅಂದಾಜು 10 ಸಾವಿರ ಬಿಪಿಎಲ್ ಕಾರ್ಡ್ ಸ್ಥಗಿತವಾಗಿದೆ, ಹಣಕಾಸು ವಹಿವಾಟು, ಆರ್ಥಿಕ ಸ್ಥಿತಿಗತಿಯನ್ನಾಧರಿಸಿ ಆಟೋಮ್ಯಾಟಿಕ್ ಆಗಿ ಬಿಪಿಎಲ್ ಕಾರ್ಡ್ ಸ್ಥಗಿತವಾಗಿದೆ. ಸದ್ಯಕ್ಕೆ ವಾರ್ಷಿಕ ಆದಾಯದ ಮಿತಿ 1.5 ಲಕ್ಷ ರೂ ಇದೆ. ಮುಂದೆ 3 ಲಕ್ಷ ರೂಗೆ ಆದಾಯದ ಮಿತಿ ಏರಿಕೆ ಮಾಡುವ ಸನ್ನಿವೇಶ ಇದ್ದು ಇದರಿಂದ ಬಿಪಿಎಲ್ ಕಾರ್ಡ್‌ದಾರರಿಗೆ ಅನುಕೂಲ ಆಗಿಲಿದೆ ಎಂದರು. ಗೃಹ ಜ್ಯೋತಿ ಯೋಜನೆಯಡಿ ಪ್ರತಿ ತಿಂಗಳ ಬಿಲ್ ಪಾವತಿಗೆ ಬಿಲ್ ಕಲೆಕ್ಟರ್ ಖುದ್ದು ಮೀಟರ್ ರೀಡರ್ ಪರಿಶೀಲಿಸಿ ಎಷ್ಟು ಯೂನಿಟ್ ಬಳಸಿದ್ದಾರೆ ಎಂದು ನಂತರ ಬಿಲ್ ನೀಡಬೇಕು. ಆದರೆ ಕೆಲವು ಭಾಗಗಳಲ್ಲಿ ಏಕಾಏಕಿ ಬಂದು ಮೀಟರ್ ನೋಡದೆ ಬಿಲ್ ನೀಡುವುದು, ದೂರದಲ್ಲಿಯೇ ಬಿಲ್ ಕೊಡುವಂತಹ ಘಟನೆಗಳು ನಡೆದಿವೆ. ಈ ರೀತಿ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಿ, ಬಿಲ್ ಕಲೆಕ್ಟರ್‌ಗಳಿಗೆ ಸೂಕ್ತ ತರಬೇತಿ ನೀಡಿ ಎಂದು ರಾಜಣ್ಣ ತಿಳಿಸಿದರು.