ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನನ್ನ ಆದ್ಯತೆ : ಎಸ್.ಟಿ ಸೋಮಶೇಖರ್/development

ದೊಡ್ಡಬಿದರಕಲ್ಲು ವಾರ್ಡಿನಲ್ಲಿ ಆಯೋಜಿಸಿದ್ದ ಜನಸ್ಪಂದನದಲ್ಲಿ ಶಾಸಕ  ಎಸ್.ಟಿ ಸೋಮಶೇಖರ್ ಮಾತನಾಡಿದರು. ಪ್ರಸಾದ್ ಕುಮಾರ್, ಲಿಖಿತ್‌ಗೌಡ ಮಂಜುನಾಥ್ ಇದ್ದರು
ದೊಡ್ಡಬಿದರಕಲ್ಲು ವಾರ್ಡಿನಲ್ಲಿ ಆಯೋಜಿಸಿದ್ದ ಜನಸ್ಪಂದನದಲ್ಲಿ ಶಾಸಕ ಎಸ್.ಟಿ ಸೋಮಶೇಖರ್ ಮಾತನಾಡಿದರು. ಪ್ರಸಾದ್ ಕುಮಾರ್, ಲಿಖಿತ್‌ಗೌಡ ಮಂಜುನಾಥ್ ಇದ್ದರು
Published on

ಯಶವಂತಪುರ : ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ ಇಡೀ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಎಸ್.ಟಿ ಸೋಮಶೇಖರ್ ಹೇಳಿದರು.

ಕ್ಷೇತ್ರದ ದೊಡ್ಡಬಿದರಕಲ್ಲು ವಾರ್ಡಿನ ಕಾಂಗ್ರೆಸ್ ಜಿಬಿಎ ಸಂಭಾವ್ಯ ಅಭ್ಯರ್ಥಿ ಪ್ರಸಾದ್ ಕುಮಾರ್ ಆರ್ ನೇತೃತ್ವದಲ್ಲಿ ಸಪ್ತಗಿರಿ ಬಡಾವಣೆಯಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿ ಮಾತನಾಡಿದರು.

ದೊಡ್ಡಬಿದರಕಲ್ಲು ವಾರ್ಡ್ ಅಭಿವೃದ್ಧಿ ವಿಚಾರವಾಗಿ ಕೆಲವರು ಜಾಲತಾಣಗಳಲ್ಲಿ

ಅಪಪ್ರಚಾರದಲ್ಲಿ ತೊಡಗಿದ್ದಾರೆ ಅದಕ್ಕೆ ಸಾರ್ವಜನಿಕರು ಕಿವಿಗೊಡಬೇಡಿ. ಯಾವುದೇ ವಾರ್ಡ್ ಇಲ್ಲವೇ ನಿರ್ದಿಷ್ಟ ಪ್ರದೇಶಗಳಿಗೆ ಸೀಮಿತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ ಎಂದರು.
ಜನಸ್ಪಂದನದಲ್ಲಿ ಸಾರ್ವಜನಿಕರ ಪ್ರತಿ ಸಮಸ್ಯೆಯನ್ನು
ದಾಖಲಿಸಿಕೊಳ್ಳಲಾಗುತ್ತದೆ. ಪರಿಹರಿಸಬಹುದಾದ ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲಾಗಿದೆ. ಉಳಿಕೆ ಸಮಸ್ಯೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಜ್ವಲಂತ ಸಮಸ್ಯೆಗಳ ಇತ್ಯರ್ಥಕ್ಕೆ ಅಧಿಕಾರಿಗಳ ತಂಡದೊಂದಿಗೆ ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ದೊಡ್ಡಬಿದರಕಲ್ಲು ವಾರ್ಡ್ ಕಾಂಗ್ರೆಸ್ ಜಿಬಿಎ ಸಂಭಾವ್ಯ ಅಭ್ಯರ್ಥಿ ಪ್ರಸಾದ್ ಕುಮಾರ್ ಆರ್. ಮಾತನಾಡಿ ವಾರ್ಡ್ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ಎಸ್.ಟಿ ಸೋಮಶೇಖರ್ ಸಾಕಷ್ಟು ಅನುದಾನ ಒದಗಿಸಿದ್ದಾರೆ ಜತೆಗೆ ಅಧಿಕಾರಿಗಳ ತಂಡದೊಂದಿಗೆ ಖುದ್ದಾಗಿ ಜನರ ಬಳಿಗೆ ಬಂದು ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದ್ದಾರೆ. ನಾಗರಿಕರು ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಸೋಮಶೇಖರ್ ಅವರ ತಂಡದೊಂದಿಗೆ ಕೈಜೋಡಿಸಿ ಮುಂಬರುವ ಜಿಬಿಎ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು
ಕ್ಷೇತ್ರದಲ್ಲಿ ಅಕ್ರಮ ಭೂ ವ್ಯವಹಾರ, ಗೂಂಡಾಗಿರಿ, ಡ್ರಗ್ಸ್ ಹಾವಳಿ, ಇಸ್ಪೀಟ್ ಅಡ್ಡೆಗಳಿಗೆ ಕಡಿವಾಣ ಹಾಕಲಾಗಿದೆ. ಹೆಜ್ಜೆ ಹೆಜ್ಜೆಗೂ ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ತೆರೆದು ಜನರನ್ನು ಮದ್ಯವ್ಯಸನಿ
ಗಳನ್ನಾಗಿಸುವುದಕ್ಕೆ ನನ್ನ ಸಹಮತವಿಲ್ಲ. ತಿಪ್ಪೇನಹಳ್ಳಿ ಬಾರ್ ವಿಚಾರವನ್ನೂ ವಿಧಾನಸಭೆ ಕಲಾಪದಲ್ಲೂ ಪ್ರಸ್ತಾಪಿಸಿದ್ದೇನೆ. ಸಾರ್ವಜನಿಕರಿಗೆ ತೊಂದರೆಯಾಗುವ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಎಸ್.ಟಿ ಸೋಮಶೇಖರ್
ತಿಳಿಸಿದರು.
ನಾಗರಿಕರು ಅಸಮರ್ಪಕ ತ್ಯಾಜ್ಯ ನಿರ್ವಹಣೆ, ಕಾವೇರಿ ನೀರು ಪೂರೈಕೆಯಲ್ಲಿನ ವ್ಯತ್ಯಯ, ಒಳಚರಂಡಿ, ರಸ್ತೆ ಗುಂಡಿ ಸಮಸ್ಯೆ ಬಾರ್ ಅಂಡ್ ರೆಸ್ಟೋರೆಂಟ್ ತೊಂದರೆ, ಕುಡುಕರ ಹಾವಳಿ, ಪುಂಡು ಪೋಕರಿಗಳ ವೀಲಿಂಗ್, ಕಳ್ಳತನ, ಭದ್ರತೆ, ಸುರಕ್ಷತೆ ಸೇರಿ ಹಲವಾರು ಸಮಸ್ಯೆಗಳ ಬಗ್ಗೆ ಶಾಸಕರಿಗೆ ಮನವಿ ಮಾಡಿಕೊಂಡರು.ಈ ವೇಳೆ ಶಾಸಕರು ಸಂಭಂದಪಟ್ಟ ಅಧಿಕಾರಿಗಳಿಗೆ ಆಯಾ ಸಮಸ್ಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ದೊಡ್ಡಬಿದರಕಲ್ಲು ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ಲಿಖಿತ್ ಗೌಡ, ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮಂಜುನಾಥ್, ಹೇರೋಹಳ್ಳಿ ಬ್ಲಾಕ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶ್ರೀಧರ್, ಮಹಿಳಾ ಅಧ್ಯಕ್ಷೆ ಸುಮಾ ಜನಾರ್ಧನ್, ಕ್ಷೇತ್ರ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ದೇವರಾಜ್, ಅಂದ್ರಹಳ್ಳಿ ವಾರ್ಡ್ ಕಾಂಗ್ರೆಸ್ ಜಿಬಿಎ ಸಂಭಾವ್ಯ ಅಭ್ಯರ್ಥಿ, ನಾಗರಾಜ್, ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ಮುನಿರಾಜು ಆರ್‌ಆರ್‌ನಗರ ಕಂದಾಯ ವಿಭಾಗದ ಡಿಸಿ ಶಂಕರ್, ಎಸಿಪಿ ಅಶೋಕ್, ಅಶೋಕ್ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ಗಳಾದ ಸಿದ್ದರಾಜೇಗೌಡ, ಪರಮೇಶ್,
ಹರಿಕುಮಾರ್, ಹಿರಿಯ ಆರೋಗ್ಯ ನಿರೀಕ್ಷಕ ರಮೇಶ್ ಮೊದಲಾದವರಿದ್ದರು.
============
ಚಿತ್ರ: ಎಸ್‌ಟಿಎಸ್/ ಆಗಸ್ಟ್ 13
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net