ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ಸಿಗಬೇಕು, ನೇರವಾಗಿ ಗ್ರಾಮ ಪಂಚಾಯಿತಿಗಳಿಗೆ ಅನುದಾನ ಬರಬೇಕು. ಇದರಿಂದ ರಸ್ತೆ, ಚರಂಡಿ, ವಿದ್ಯುತ್ ಸೇರಿ ಎಲ್ಲ ಬಗೆಯ ಮೂಲ ಸೌಕರ್ಯಗಳ ಅಭಿವೃದ್ಧಿ ವೇಗ ಹೆಚ್ಚಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಈ ನಿಟ್ಟಿನಲ್ಲಿ ಡಿ.ಆರ್.ಪಾಟೀಲ್ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಪಂಚಾಯಿತಿಗಳ, ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಕುರಿತು ಒಂದು ವಿಸ್ತೃತ ವರದಿಯನ್ನು ಸಿದ್ದಪಡಿಸಲಿ, ಶೀಘ್ರ ನಾವು ವರದಿ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಿದ್ದೇವೆ ಎಂದು ಹೇಳಿದರು.