ಹೌದು!..ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳ ಉತ್ಪಾದನೆ, ಮಾರಾಟ ಹಾಗೂ ಖರೀದಿಯನ್ನು ಸರ್ಕಾರ ನಿಷೇಧಿಸಿದ್ದರೂ, ಗ್ರಾಮಾಂತರ ಜಿಲ್ಲೆಯ ನಾಲ್ಕೂ ತಾಲೂಕು ವ್ಯಾಪ್ತಿಯಲ್ಲಿ ಇದಕ್ಕೆ ಕಡಿವಾಣ ಬಿದ್ದಿಲ್ಲ, ನಗರ ಪಟ್ಟಣ ಪ್ರದೇಶವಲ್ಲದೇ ಗ್ರಾಮೀಣ ಪ್ರದೇಶಗಳಲ್ಲೂ ಪ್ಲಾಸ್ಟಿಕ್ ತ್ಯಾಜ್ಯದ ರಾಶಿ ಕಣ್ಣಿಗೆ ರಾಚುತ್ತಿದೆ. ರಸ್ತೆ ಬದಿಗಳು, ರಾಜಕಾಲುವೆ, ಚರಂಡಿ, ಖಾಲಿ ನಿವೇಶನಗಳು ಸೇರಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ತ್ಯಾಜ್ಯದ ರಾಶಿ ಕಂಡುಬರುತ್ತಿದೆ. ನಗರ ಹಾಗೂ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ, ಪಂಚಾಯಿತಿ ವ್ಯಾಪ್ತಿಯಲ್ಲಿನ ಸಿಬ್ಬಂದಿಗಳ ಬೇಜವಬ್ದಾರಿ ಲವಾಗಿ ಪ್ಲಾಸ್ಟಿಕ್ ಉತ್ಪನ್ನಗಳ ಉತ್ಪಾದನೆ ಹಾಗೂ ಬಳಕೆಗೆ ಕಡಿವಾಣ ಇಲ್ಲದಂತಾಗಿದೆ.